ತೀರ್ಥಹಳ್ಳಿ : ಗದ್ದೆಯ ಹೊಂಡದಲ್ಲಿ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಮೇಲಿನ ತುದೂರು ಗ್ರಾಮದಲ್ಲಿ ನಡೆದಿದೆ.
ಶಂಕರ್ ಬಿನ್ ಲಿಂಗಾನಾಯ್ಕ್ 53 ವರ್ಷ ಮೃತ ದುರ್ದೈವಿ. ಗುರುವಾರ ರಾತ್ರಿ ಗದ್ದೆಗೆ ತೆರಳಿದ್ದ ಸಂದರ್ಭದಲ್ಲಿ ಕಾಲು ಜಾರಿ ಹೊಂಡಕ್ಕೆ ಬಿದ್ದು ಶಂಕರ್ ಮೃತಪಟ್ಟಿದ್ದಾರೆ.
ಗದ್ದೆಗೆ ತೆರಳಿದ್ದ ಶಂಕರ್ ಬೆಳಗ್ಗೆಯಾದರೂ ಮನೆಗೆ ಬಂದಿರಲಿಲ್ಲ. ಗಾಬರಿಗೊಂಡ ಕುಟುಂಬಸ್ಥರು ಗದ್ದೆಗೆ ಹೋಗಿ ನೋಡಿದಾಗ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ತೀರ್ಥಹಳ್ಳಿ ತಹಶೀಲ್ದಾರ್ ಶ್ರೀಪಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರುಪೂರ್ವ ಮಳೆ ಅವಾಂತರ ಸೃಷ್ಟಿಸುತ್ತಿದೆ. ಹಲವೆಡೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಶಿವಮೊಗ್ಗ ಜಿಲ್ಲಾದ್ಯಂತ ಕಳೆದ ಎರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಹಲವೆಡೆ ಅವಾಂತರಗಳೇ ಸೃಷ್ಟಿಯಾಗಿವೆ.
Related Articles
ಇದನ್ನೂ ಓದಿ :ಭಾರೀ ಮಳೆ: ಕೇರಳದ 12 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್