Advertisement
ಹಾವೇರಿ ಜಿಲ್ಲೆಯಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. ಗುರುವಾರ ಬೆಳಗ್ಗೆ ಎಸ್ಪಿ ಕಚೇರಿ ಎದುರು ಮಳೆ ನೀರಿನಲ್ಲಿ ರಸ್ತೆ ಕಾಣದೆ ಚರಂಡಿಗೆ ಬಿದ್ದು ಬಾಲಕ ಮೃತಪಟ್ಟಿದ್ದಾನೆ.
Related Articles
Advertisement
ಹರಿಹರದಲ್ಲಿ ಕಾಲುವೆ ನೀರು ಮನೆಗಳಿಗೆ ನುಗ್ಗಿ 100 ಹೆಚ್ಚು ಕುಟುಂಗಳು ಅತಂತ್ರವಾಗಿವೆ. ಹೊಲಗಳಿಗೆ ನೀರು ನುಗ್ಗಿದ್ದರಿಂದ ಮೆಕ್ಕೆಜೋಳ, ಈರುಳ್ಳಿ ಬೆಳೆಗೆ ಅಪಾರ ಹಾನಿಯಾಗಿದೆ.
ಬಾಗಲಕೋಟೆ ಜಿಲ್ಲೆಯಲ್ಲಿ ಮುಂಗಾರಿಗೆ 31 ಸಾವಿರ ಹೆಕ್ಟೇರ್ ಈರುಳ್ಳಿ ಬೆಳೆಯಲಾಗಿತ್ತು. ಈ ಪೈಕಿ ಶೇ.25ರಷ್ಟು ಮಾತ್ರ ಕಟಾವು ಮಾಡಲಾಗಿದ್ದು ಶೇ.75ರಷ್ಟು ಬೆಳೆ ಹಾನಿಯಾಗುವ ಸ್ಥಿತಿ ನಿರ್ಮಾಣವಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರು, ಸಿರಗುಪ್ಪ, ಕಂಪ್ಲಿಯಲ್ಲಿ ಸಾವಿರಾರು ಹೆಕ್ಟೇರ್ ಭತ್ತದ ಬೆಳೆ ನೆಲಕಚ್ಚಿದೆ. ಬೆಳಗಾವಿ ಜಿಲ್ಲೆಯಲ್ಲಿ ಗಾಳಿ ಮಳೆಗೆ ಕಬ್ಬು ನೆಲಕ್ಕುರುಳಿದೆ. ನೇಸರಗಿಯಲ್ಲಿ ಮನೆ ಗೋಡೆ ಕುಸಿದಿದ್ದು ಐವರು ಪಾರಾಗಿದ್ದಾರೆ. ಚಿಕ್ಕಮಗಳೂರಿನಲ್ಲಿ ಕಾಫಿ ಬೆಳೆ ನಷ್ಟವಾಗಿದೆ.
ಚಿತ್ರದುರ್ಗ ಜಿಲ್ಲೆ ಸಿರಿಗೆರೆ ತಾಲೂಕಿನ ಕೊಡಗವಳ್ಳಿ ಗ್ರಾಮದ ಕೆರೆ ತುಂಬಿ ತುಳುಕುತ್ತಿದ್ದು ಏರಿ ಕುಸಿಯುವ ಭೀತಿ ಎದುರಾಗಿದೆ. ಧಾರವಾಡ ಜಿಲ್ಲೆ ಕುಂದಗೋಳ ತಾಲೂಕು ದೇವನೂರು ಗ್ರಾಮದಲ್ಲಿ ಬೆಣ್ಣೆ ಹಳ್ಳದ ಪ್ರವಾಹಕ್ಕೆ ಸಿಲುಕಿದ್ದ 150 ಕುರಿ ಹಾಗೂ ಮೂವರು ಕುರಿಗಾಹಿಗಳನ್ನು ರಕ್ಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ.