Advertisement

Rain update: ರಾಜ್ಯದ ಕೆಲವೆಡೆ ಭಾರೀ ಮಳೆ ಸಾಧ್ಯತೆ

08:55 PM Apr 06, 2023 | Team Udayavani |

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದ ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

Advertisement

ಉತ್ತರ ಒಳನಾಡಿನ ಗದಗ, ಕೊಪ್ಪಳ, ಹಾವೇರಿ, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು, ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾ., ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ತುಮಕೂರು, ಚಾಮರಾಜನಗರ, ಮೈಸೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆ, ದಕ್ಷಿಣ ಕನ್ನಡದ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ ಉಳಿದ ಕಡೆಗಳಲ್ಲಿ ಒಣ ಹವೆ ಮುಂದುವರಿಯಲಿವೆ.

ಕೆಲವೆಡೆ ಆಲಿಕಲ್ಲು ಮಳೆ ಸಾಧ್ಯತೆ
ಮುಂದಿನ 24 ಗಂಟೆಗಳಲ್ಲಿ ಬೀದರ್‌, ಯಾದಗಿರಿ, ಕಲಬುರಗಿ, ವಿಜಯಪುರದಲ್ಲಿ ಆಲಿಕಲ್ಲು ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದೆ. ತಾಸಿಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿವೆ. ಕರಾವಳಿಯ ದಕ್ಷಿಣಕನ್ನಡ ಜಿಲ್ಲೆ ಹಾಗೂ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು, ಮಿಂಚಿನ ಮುನ್ನೆಚ್ಚರಿಕೆ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next