Advertisement
ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲೂ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ಗದಗ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಶನಿವಾರ ಕಲಬುರಗಿಯಲ್ಲಿ ರಾಜ್ಯದಲ್ಲೇ ಅತ್ಯಧಿಕ ಗರಿಷ್ಠ 41.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕೊಪ್ಪಳ 41.5, ಬಳ್ಳಾರಿ 41.9, ವಿಜಯಪುರ 41, ರಾಯಚೂರು 40.2,ಧಾರವಾಡ 38.2, ಬೀದರ್ 38, ದಾವಣಗೆರೆ 38.8, ಮೈಸೂರಿನಲ್ಲಿ 36.4, ಮಂಗಳೂರು 36.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.
Related Articles
ಬೆಂಗಳೂರಿನಲ್ಲಿ ಶನಿವಾರ 36.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಹಲವು ಕಡೆಗಳಲ್ಲಿ ಶನಿವಾರ ಸಂಜೆ ಸಾಧಾರಣ ಮಳೆ ಸುರಿದಿದ್ದು, ಸುಡು ಬಿಸಿಲಿನಿಂದ ಬೆಂದಿದ್ದ ಬೆಂಗಳೂರಿಗೆ ವರುಣ ತಂಪೆರೆದಿದ್ದಾನೆ. ಚಾಮರಾಜಪೇಟೆ, ರಾಜಾಜಿನಗರ, ಚಂದ್ರಲೇಔಟ್, ಮೆಜೆಸ್ಟಿಕ್, ಸಿಟಿ ಮಾರುಕಟ್ಟೆ, ರಿಚ್‌ಮಂಡ್ ರಸ್ತೆ, ನಂಜಪ್ಪ ಸರ್ಕಲ್, ಜಯನಗರ, ಜೆಪಿ ನಗರ, ಬನಶಂಕರಿ, ಶಾಂತಿನಗರ, ಜೆಪಿ ನಗರ, ಬಿಟಿಎಂ ಲೇಔಟ್ ಸೇರಿದಂತೆ ವಿವಿಧೆಡೆ ಮಳೆಯಾಗಿದೆ.ಕೆಲವಡೆ ಗುಡುಗು ಮಿಂಚು ಸಹಿತ ಮಳೆಯಾಗಿದೆ. ಮಳೆಯಾದ ರಸ್ತೆಗಳಲ್ಲಿ ನೀರು ನಿಂತು ಸಂಚಾರ ದಟ್ಟಣೆ ಉಂಟಾಯಿತು.
Advertisement