Advertisement

Rain Update: ರಾಜ್ಯದ ಕೆಲವೆಡೆ ಬಿರುಗಾಳಿ ಸಹಿತ ಮಳೆ-ಹವಾಮಾನ ಇಲಾಖೆ ಮುನ್ನೆಚ್ಚರಿಕೆ

09:03 PM Apr 15, 2023 | Team Udayavani |

ಬೆಂಗಳೂರು: ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆ, ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕೊಟ್ಟಿದೆ.

Advertisement

ಕರಾವಳಿಯ ಒಂದೆರಡು ಕಡೆ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳಿವೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಳವಾಗಲಿದೆ.
ಶನಿವಾರ ಬೆಳಗಾವಿಯ ಚಿಕ್ಕೋಡಿಯಲ್ಲಿ 5, ಬೆಳಗಾವಿಯ ರಾಯಬಾಗ, ಬೈಲಹೊಂಗಲ, ಧಾರವಾಡದ ಕಲಘಟಗಿ ತಲಾ 2, ಉತ್ತರ ಕನ್ನಡದ ಹಳಿಯಾಳ, ಮುಂಡಗೋಡ, ಜಗಲಬೆಟ್‌, ಬೀದರ್‌, ಮಂಠಾಳ, ಬಾಲ್ಕಿ, ಬೆಳಗಾವಿಯ ನಿಪ್ಪಾಣಿ, ಸುತಗಟ್ಟಿ, ಮುಟ್ಟಿಕೊಪ್ಪ, ವಿಜಯಪುರದ ಇಂಡಿ, ಬಾಗಲಕೋಟೆಯ ಮಹಲಿಂಗಪುರದಲ್ಲಿ ತಲಾ 2 ಸೆಂ.ಮೀ. ಮಳೆಯಾಗಿದೆ.

ಕಲಬುರಗಿಯಲ್ಲಿ 40.9 ಡಿಗ್ರಿ ಸೆಲ್ಸಿಯಸ್‌ ರಾಜ್ಯದಲ್ಲೇ ಅತ್ಯಧಿಕ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ 36 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ರಾಯಚೂರು 40, ಬಳ್ಳಾರಿ 39.4, ಕೊಪ್ಪಳ 38.6, ಗದಗ 38.6, ವಿಜಯಪುರ 38.5, ದಾವಣಗೆರೆ 37.2, ಮಂಗಳೂರು 35.6 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next