Advertisement

Rain Updates: ರಾಜ್ಯದ ಕೆಲವೆಡೆ ಭಾರೀ ಮಳೆ ಸಾಧ್ಯತೆ

09:44 PM Apr 08, 2023 | Team Udayavani |

ಬೆಂಗಳೂರು: ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗಿನಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಹಾವೇರಿ, ಧಾರವಾಡ, ಗದಗ, ಬಾಗಲಕೋಟೆ, ಕಲಬುರಗಿ, ಬೀದರ್‌ ಮತ್ತು ಕೊಪ್ಪಳ ಜಿಲ್ಲೆಗಳ ಕೆಲವು ಕಡೆ; ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆ ಹಾಗೂ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಗಳಿವೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ. ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ.

Advertisement

ರಾಜ್ಯದ ಕೆಲವೆಡೆ ಮಳೆ
ಶನಿವಾರ ಉತ್ತರ ಒಳನಾಡಿನ ಕೆಲವು ಕಡೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next