ದೇವನಹಳ್ಳಿ: ಜಿಲ್ಲೆಯ ಎಲ್ಲಾ ಸರ್ಕಾರಿ ಕಟ್ಟಡ ಹಾಗೂ ಕೈಗಾರಿಕೆಗಳು ಮಳೆ ನೀರು ಕೊಯ್ಲು ಪದ್ಧತಿಯನ್ನು ಕಡ್ಡಾಯವಾಗಿ ಅಳವಡಿಸಿಕೊಂಡು ಮಳೆ ನೀರನ್ನು ಸಂಗ್ರಹಿಸುವ ಮೂಲಕ ಅಂತರ್ಜಲ ಮರುಪೂರಣ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ತಾಲೂಕಿನ ಜಿಲ್ಲಾಡಳಿತ ಭವನದ ಜಿಪಂ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಜಲಶಕ್ತಿ ಅಭಿಯಾನ ಆಂದೋಲನ ಕ್ರಿಯಾಯೋಜನೆ ಅನುಷ್ಠಾನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕ್ರಿಯಾ ಯೋಜನೆ ಸಲ್ಲಿಸಿ: ಪ್ರಧಾನಿ ನರೇಂದ್ರ ಮೋದಿ ಅವರ ಕಾಳಜಿ ಮೇರೆಗೆ “ಕ್ಯಾಚ್ ದ ರೈನ್’ ಅಭಿಯಾನದಡಿ ಮಳೆನೀರು ಸಂಗ್ರಹಕ್ಕೆ ಮುಂದಾಗಿದ್ದು, ಏ.6ರೊಳಗೆ ಎಲ್ಲಾ ಇಲಾಖೆ ಗಳು ತಮ್ಮವ್ಯಾಪ್ತಿಯಲ್ಲಿನ ಜಲಶಕ್ತಿ ಅಭಿಯಾನ ಆಂದೋಲನ ಕ್ರಿಯಾ ಯೋಜನೆ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.
ನಗರ ಪ್ರದೇಶಗಳಲ್ಲಿ ಈಗಾಗಲೇ ಬ್ಲಾಕ್‌ವಾರು ಕೋವಿಡ್ ಲಸಿಕೆ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿಯೂ ಈ ಕಾರ್ಯ ಆಗಬೇಕು ಎಂದರು. ಅಲ್ಲದೇ, ಕಳೆದ 3 ವರ್ಷಗಳಿಂದಜಿಲ್ಲೆಯಲ್ಲಿ ಕೊರೆದಿರುವ ಕೊಳವೆ ಬಾವಿ ಗಳ ಮಾಹಿತಿ ನೀಡುವಂತೆ ಸೂಚಿಸಿದರು.ಹಾಗೆಯೇ ಅಗತ್ಯವಿರುವ ಗ್ರಾಮಗಳಿಗೆ ತುರ್ತಾಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆಗ್ರಾಮೀಣಾಭಿವೃದ್ಧಿ ಮತ್ತು ಕುಡಿವ ನೀರುಸರಬರಾಜು ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಪಂ ಸಿಇಒ ಎಂ.ಆರ್.ರವಿಕುಮಾರ್ ಮಾತನಾಡಿ, ಒತ್ತುವರಿ ತೆರವುಗೊಳಿಸಿಕೆರೆಗಳ ಸುತ್ತಲೂ ಮರ ಬೆಳೆಸಬೇಕು, ಅರಣ್ಯ ಪ್ರದೇಶದಲ್ಲಿ ಜಲಾನಯನಯೋಜನೆಯಡಿ ನಿರ್ಮಿಸಿರುವ ಚೆಕ್ ಡ್ಯಾಂಗಳನ್ನು ಮಳೆಗಾಲ ಆರಂಭಕ್ಕೂಮುನ್ನ ಸುಸ್ಥಿಯಲ್ಲಿಡಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಡಾ.ಜಗದೀಶಕೆ.ನಾಯಕ್, ಜಿಪಂ ಉಪ ಕಾರ್ಯದರ್ಶಿಕೆ.ಕರಿಯಪ್ಪ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಜಿಲ್ಲಾಧಿಕಾರಿ ಸೂಚನೆ ಏನೇನು? :
ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಪಂಗಳು ಕೊಳವೆ ಬಾವಿಗಳ ಮರುಪೂರಣಕ್ಕೆ ಒತ್ತು ನೀಡಬೇಕು.
ಕೆರೆ, ಕುಂಟೆ ಹಾಗೂ ಕಲ್ಯಾಣಿಗಳಲ್ಲಿ ಹೂಳು ತೆಗೆಯಿರಿ.
ನೀರಿನ ಸಂಗ್ರಹದ ಮೂಲ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಬೇಕು.
ನೀರಿನ ನಾಲೆ ಗುರುತಿಸಿ ಸರಾಗವಾಗಿ ಹರಿಯುವಂತೆ ಮಾಡಬೇಕು.
ಜಿಲ್ಲೆಯ 1075 ಕಂದಾಯ ಗ್ರಾಮಗಳಲ್ಲಿನ ಕೊಳವೆಬಾವಿಗಳ ಬಳಿ ಇಂಗು ಗುಂಡಿನಿರ್ಮಿಸಬೇಕು. ಪ್ರವಾಸೋದ್ಯಮ, ಮುಜರಾಯಿ ಇಲಾಖೆಹಾಗೂ ಪ್ರಾಚ್ಯವಸ್ತು ಸಂಗ್ರಹಾಲಯದಡಿ ಬರುವ ಕಲ್ಯಾಣಿಗಳನ್ನು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸ್ವಚ್ಛಗೊಳಿಸಲು ಮುಂದಾಗಬೇಕು.
– ಎಂ.ಆರ್.ರವಿಕುಮಾರ್, ಜಿಪಂ ಸಿಇಒ