Advertisement
ಈ ಮಧ್ಯೆ ಆಶಾ ಕಾರ್ಯಕರ್ತೆಯರು ಹಾಗೂಪಾಲಿಕೆ ಸಿಬ್ಬಂದಿ ಕೋವಿಡ್ ತಡೆ, ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರು, ಕಂಟೈನ್ಮೆಂಟ್ ಝೋನ್ ವ್ಯಾಪ್ತಿಯಲ್ಲಿ ಇರುವವರ ಆರೋಗ್ಯ ತಪಾಸಣೆ ಮತ್ತು ವಲಸೆ ಕಾರ್ಮಿಕರ ಆರೋಗ್ಯ ತಪಾಸಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇಷ್ಟೆಲ್ಲಾ ಕಾರ್ಯಗಳ ನಡುವೆ ಉಳಿದ ಕಾಯಿಲೆಗಳಿಗೆ ಪತ್ರಿ ವರ್ಷದಂತೆ ಮನೆ-ಮನೆ ಸಮೀಕ್ಷೆ ಹಾಗೂ ಜಾಗೃತಿ ತ್ರಾಸದಾಯಕವಾಗಲಿದೆ.
Related Articles
ನಗರದಲ್ಲಿ ಕೋವಿಡ್ ಸೋಂಕು ಕಡಿವಾಣ ಸದ್ಯಕ್ಕೆ ಇರುವ ಬಹುದೊಡ್ಡ ಸವಾಲು ಇದಕ್ಕೆ ಕಡಿವಾಣ ಹಾಕುವುದಕ್ಕೆ ಆದ್ಯತೆ ನೀಡಲಾಗುತ್ತಿದೆ. ನಗರದಲ್ಲಿ ಕಾಲರಾ, ಎಚ್1ಎನ್1, ಚಿಕೂನ್‌ಗುನ್ಯಾ, ಹಾಗೂ ಟಿಬಿ ರೋಗ ಸೇರಿದಂತೆ ಬೇರೆ ಕಾಯಿಲೆ ಪ್ರಕರಣಗಳ ಬಗ್ಗೆ ನಿಖರ ಮಾಹಿತಿ ಸದ್ಯಕ್ಕೆ ನೀಡುವುದು ಬೇಡ ಎಂದು ಹಿರಿಯ ಅಧಿಕಾರಿಗಳು ಮೌಖಿಕ
ಸೂಚನೆ ನೀಡಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
Advertisement
ರೋಗ ಹೆಚ್ಚುವ ಸಾಧ್ಯತೆರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಪ್ರಾರಂಭವಾಗಿದ್ದು, ನಗರದಲ್ಲೂ ಚದುರಿದಂತೆ, ಕೆಲವೆಡೆ ಧಾರಾಕಾರ ಮಳೆಯಾಗಲಿದೆ ಎನ್ನುತ್ತಾರೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವರಿ ನಿರ್ದೇಶಕ ಶ್ರೀನಿವಾಸ್ ರೆಡ್ಡಿ. ಈ ಸಂಬಂಧ ಉದಯವಾಣಿಯೊಂದಿಗೆ ಮಾತನಾಡಿದ ಅವರು, ಮಧ್ಯ ಮಹಾರಾಷ್ಟ್ರದಿಂದ ತಮಿಳುನಾಡಿನ ಮಧ್ಯೆ ವಾಯುಭಾರ ಕುಸಿತ
ಉಂಟಾಗಲಿದೆ. ಇದರಿಂದ ನಗರದ ವಾತಾವರಣವೂ ಬದಲಾಗಲಿದೆ. ಅಲ್ಲಲ್ಲಿ ಚದುರಿದಂತೆ ಹಾಗೂ ಕೆಲವೆಡೆ ಧಾರಾಕಾರ, ಆಲಿಕಲ್ಲು ಮಳೆಯಾಗುವ ಸಾಧ್ಯತೆಯೂ ಇದೆ. ಆದರೆ, ಒಟ್ಟಾರೆ ಮಳೆ ಪ್ರಮಾಣ ಹೆಚ್ಚು ಇರುವುದಿಲ್ಲ. ಮುಂಗಾರು ಪೂರ್ವ ಮಳೆ ಮೇ. ಮತ್ತು ಜೂನ್‌ನಲ್ಲಿ ಆಗುತ್ತದೆ. ಈ ಬಾರಿ ಮುಂಗಾರು ಮಳೆ ವ್ಯಾಪಕವಾಗಿ ಆಗುವುದಿಲ್ಲ ಎಂದು ಹೇಳಿದರು. ಈ ರೀತಿ
ಚದುರಿದಂತೆ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಸಾಮಾನ್ಯವಾಗಿ ಜೋರು ಮಳೆ ಬಂದರೆ ನೀರು ನಿಲ್ಲುವ ಸಾಧ್ಯತೆ ಕಡಿಮೆ. ಆಗ್ಗಾಗೆ ಮಳೆ ಬಂದರೆ ನೀರು ಅಲ್ಲಲ್ಲಿ ನಿಲ್ಲುವ ಸಾಧ್ಯತೆ ಇರುತ್ತದೆ. ನೀರು ಸಂಗ್ರಹವಾಗಿ ಸೊಳ್ಳೆಗಳು ಉತ್ಪತ್ತಿಯಾದರೆ ರೋಗದ ಪ್ರಮಾಣ ಉಲ್ಬಣಿಸುವ ಸಾಧ್ಯತೆ ಹೆಚ್ಚು ಎನ್ನುತ್ತಾರೆ ವೈದ್ಯರು. ಡೆಂಘಿ, ಎಚ್1ಎನ್1 ಸೇರಿದಂತೆ ಎಲ್ಲ ಸಾಂಕ್ರಾಮಿಕ ರೋಗಗಳ ಬಗ್ಗೆಯೂ ನಿಗಾ ವಹಿಸಿದ್ದೇವೆ. ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಫಾಗಿಂಗ್ ಕಾರ್ಯಾಚರಣೆ ನಡೆದಿದೆ. ಈಗಾಗಲೇ ಕಂಟೈನ್ಮೆಂಟ್ ಝೋನ್ ಸೇರಿದಂತೆ ವಿವಿಧೆಡೆ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡುತ್ತಿದ್ದು, ರೋಗ ನಿಯಂತ್ರಣಕ್ಕೆ ಬರಲಿದೆ.
– ಡಾ.ವಿಜಯೇಂದ್ರ, ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಮುಂಗಾರು ಪೂರ್ವ ಮಳೆ ಪ್ರಾರಂಭವಾಗಿದ್ದು, ನಗರದಲ್ಲೂ ಮಳೆಯಾಗಲಿದೆ. ಅಲ್ಲಲ್ಲಿ ಚದುರಿದಂತೆ ಹಾಗೂ ಕೆಲವೆಡೆ ಧಾರಾಕಾರ, ಆಲಿಕಲ್ಲು ಮಳೆಯಾಗಲಿದೆ. ಆದರೆ, ಒಟ್ಟಾರೆ ಮಳೆ ಪ್ರಮಾಣ ಹೆಚ್ಚು ಇರುವುದಿಲ್ಲ.
– ಶ್ರೀನಿವಾಸ್‌ರೆಡ್ಡಿ, ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ನಿರ್ದೇಶಕ ●ಹಿತೇಶ್ ವೈ