Advertisement
ಪ್ರತೀ ವರ್ಷ ಕರಾವಳಿ ಸಹಿತ ಮಲೆನಾಡು ಪ್ರದೇಶಗಳಲ್ಲಿ ಪೂರ್ವ ಮುಂಗಾರು, ಮುಂಗಾರು ಮತ್ತು ಹಿಂಗಾರು ಉತ್ತಮವಾಗಿರುತ್ತದೆ. ಆದರೆ ಈ ಬಾರಿ ಇಡೀ ರಾಜ್ಯದಲ್ಲಿಯೇ ಪೂರ್ವ ಮುಂಗಾರು ದುರ್ಬಲವಾಗಿದ್ದು, ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆ ಗಳಾದ ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆ ಹೊರತುಪಡಿಸಿದರೆ ಉಳಿದ ಎಲ್ಲ ಜಿಲ್ಲೆಗಳಲ್ಲಿ ಮಳೆ ಪ್ರಮಾಣದಲ್ಲಿ ಕೊರತೆ ಇದೆ.
Related Articles
ಈ ವರ್ಷ ಪೂರ್ವ ಮುಂಗಾರು ಮಳೆ ಕೊರತೆ ಉಂಟಾಗಿರುವ ರಾಜ್ಯದ ಜಿಲ್ಲೆಗಳ ಪೈಕಿ ಉಡುಪಿ ಜಿಲ್ಲೆ ನಾಲ್ಕನೇ ಸ್ಥಾನದಲ್ಲಿದೆ. ಉತ್ತರ ಒಳನಾಡಿನ ಬೀದರ್ ಜಿಲ್ಲೆ ಮೊದಲನೇ ಸ್ಥಾನದಲ್ಲಿದ್ದು, 41.4 ಮಿ.ಮೀ. ವಾಡಿಕೆ ಮಳೆಯಾಗುವಲ್ಲಿ ಕೇವಲ 11.7 ಮಿ.ಮೀ. ಮಳೆಯಾಗಿ ಶೇ.72ರಷ್ಟು ಮಳೆ ಕೊರತೆ ಇದೆ. ಎರಡನೇ ಸ್ಥಾನದಲ್ಲಿ ಬೆಳಗಾವಿ ಜಿಲ್ಲೆ ಇದ್ದು, 58.4 ಮಿ.ಮೀ. ವಾಡಿಕೆ ಮಳೆಯಾಗಬೇಕು. ಆದರೆ ಸುರಿದದ್ದು ಕೇವಲ 17 ಮಿ.ಮೀ. ಇದರಿಂದ ಶೇ 71 ರಷ್ಟು ಮಳೆ ಕೊರತೆ ಇದೆ. ಮೂರನೇ ಸ್ಥಾನದಲ್ಲಿ ರಾಯಚೂರು ಜಿಲ್ಲೆ ಇದ್ದು, 35.1 ಮಿ.ಮೀ. ವಾಡಿಕೆ ಮಳೆಯಲ್ಲಿ 10.5 ಮಿ.ಮೀ. ಮಳೆ ಸುರಿದು ಶೇ 70ರಷ್ಟು ಮಳೆ ಕೊರತೆ ಇದೆ. ಉಡುಪಿ ಜಿಲ್ಲೆ ನಾಲ್ಕನೇ ಸ್ಥಾನದಲ್ಲಿದ್ದು, ಇಲ್ಲಿ 66.8 ಮಿ.ಮೀ. ವಾಡಿಕೆ ಮಳೆಯಾಗಬೇಕು. ಕೇವಲ 21.8 ಮಿ.ಮೀ. ಮಳೆ ಸುರಿದು ಶೇ. 67ರಷ್ಟು ಮಳೆ ಕೊರತೆ ಉಂಟಾಗಿದೆ.
Advertisement
ಗರಿಷ್ಠ ಉಷ್ಣಾಂಶದಿಂದ ಮೀನುಗಾರಿಕೆಗೆ ತೊಂದರೆ“ಈಗಿನ ಹವಾಮಾನ ವೈಪರೀತ್ಯದಿಂದಾಗಿ ಮೀನುಗಾರಿಕೆಗೂ ಪೆಟ್ಟು ಬಿದ್ದಿದೆ. ಬಿಸಿಲಿನ ಬೇಗೆಯಿಂದ ಆಳ ಸಮುದ್ರದಲ್ಲಿ ಅಂದು ಕೊಂಡಷ್ಟು ಮೀನು ಸಿಗುತ್ತಿಲ್ಲ. ಉಷ್ಣಾಂಶದ ಏರಿಕೆಯಿಂದ ಆಳದಲ್ಲಿರುವ ಮೀನು ಮೇಲೆ ಬರುತ್ತಿಲ್ಲ. ಇದರಿಂದಾಗಿ ಮೀನುಗಾರರು ಸಂಕಷ್ಟ ಅನುಭವಿಸುತ್ತಿದ್ದಾರೆ ಎನ್ನುತ್ತಾರೆ ಮೀನುಗಾರ ಮುಖಂಡರು. ಮುಂಗಾರು ಕ್ಷೀಣ
ಈ ಬಾರಿಯ ಪೂರ್ವ ಮುಂಗಾರು ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಕ್ಷೀಣಿಸಿದೆ. ದಕ್ಷಿಣ ಒಳನಾಡಿನಲ್ಲಿ ಮೇಲ್ಮೆ ç ಸುಳಿಗಾಳಿ ಇದ್ದು, ಗಾಳಿಯ ಒತ್ತಡ ಕಡಿಮೆ ಇರುವ ಕಾರಣದಿಂದಾಗಿ ಬೆಂಗಳೂರು ಸಹಿತ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಸುರಿಯುತ್ತಿದೆ.
– ಶ್ರೀನಿವಾಸ ರೆಡ್ಡಿ,
ಕೆಎಸ್‌ಎನ್‌ಡಿಎಂಸಿ ನಿರ್ದೇಶಕ – ನವೀನ್ ಭಟ್ ಇಳಂತಿಲ