Advertisement
ಕರಾವಳಿಗೆ ಎರಡು ದಿನ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಸದ್ಯದ ಪ್ರಕಾರ ಗುರುವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Related Articles
Advertisement
ಸೋಮವಾರ ಬೆಳಗ್ಗಿನಿಂದ ಮಧ್ಯಾಹ್ನದ ವರೆಗೆ ಬಿಸಿಲಿನ ವಾತಾವರಣ ಇತ್ತು. ಬಳಿಕ ಉತ್ತಮ ಮಳೆ ಸುರಿದಿದೆ. ಸುಳ್ಯ ನಗರ, ಜಾಲೂÕರು, ಮಂಡೆಕೋಲು, ಸಂಪಾಜೆ, ಅರಂತೋಡು, ಬೆಳ್ಳಾರೆ, ಪಂಜ, ಕಲ್ಮಡ್ಕ, ಕೊಲ್ಲಮೊಗ್ರು, ಹರಿಹರ, ಕುಕ್ಕೆ ಸುಬ್ರಹ್ಮಣ್ಯ, ಬಳ್ಪ, ಎಡಮಂಗಲ, ಬಿಳಿನೆಲೆ ಪರಿಸರದ ಹಲವೆಡೆ ಉತ್ತಮ ಮಳೆಯಾಗಿದೆ. ರವಿವಾರವೂ ಮಳೆಯಾಗಿತ್ತು.
ಬೆಳ್ತಂಗಡಿಯಲ್ಲಿ ಮಳೆ, ಬರೆ ಕುಸಿತಬೆಳ್ತಂಗಡಿ: ತಾಲೂಕಿನಲ್ಲಿ ಸಂಜೆ ಬಳಿಕ ನಿರಂತರ ಮಳೆಯಾಗುತ್ತಿದ್ದು, ಸೋಮವಾರವೂ ರಾತ್ರಿ 7.30ರಿಂದ ಒಂದು ತಾಸು ಮಳೆಯಾಗಿದೆ. ರವಿವಾರ ರಾತ್ರಿ ಸುರಿದ ಭಾರಿ ಮಳೆಗೆ ಮುಂಡಾಜೆ- ಧರ್ಮಸ್ಥಳ ರಸ್ತೆಯ ಗುಂಡಿ ದೇವಸ್ಥಾನ, ಮಾಣಿಂಜ, ಪಿಲತ್ತಡ್ಕ, ಕಲ್ಮಂಜ ಸೇರಿದಂತೆ ಅಲ್ಲಲ್ಲಿ ಗುಡ್ಡ ಕುಸಿತವಾಗಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮುಂಡಾಜೆಯ ಶ್ರೀಧರ ಪೂಜಾರಿ ಅವರ ಮನೆ ಮೇಲ್ಭಾಗದಲ್ಲಿ ಬರೆ ಜರಿದು ರಸ್ತೆಗೆ ಬಿದ್ದಿದೆ. ದ.ಕ., ಉಡುಪಿ: ಇಂದು ಭಾರೀ ಮಳೆ ಸಾಧ್ಯತೆ
ಆಗ್ನೇಯ ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಮುಂದಿನ ಮೂರ್ನಾಲ್ಕು ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಜತೆಗೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಬೀಳ ಬ ಹು ದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರೀ ಗುಡುಗು ಸಹಿತ ಮಳೆ ಸುರಿಯುವ ನಿರೀಕ್ಷೆಯಿದೆ. ಜತೆಗೆ ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಯಗಟಿಯಲ್ಲಿ 5 ಸೆಂ.ಮೀ. ಮಳೆ
ಬೆಂಗಳೂರು: ಸೋಮವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ನೈಋತ್ಯ ಮಾನ್ಸೂನ್ ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿತ್ತು. ಕರಾವಳಿಯಲ್ಲಿ ಬಹುತೇಕ ಕಡೆಗಳಲ್ಲಿ ಮಳೆಯಾಗಿತ್ತು. ದಕ್ಷಿಣ ಒಳನಾಡಿನ ಕೆಲವೆಡೆ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಯಿತು. ಹಾವೇರಿ ಜಿಲ್ಲೆಯ ಹಿರೇಕೆರೂರು ಮತ್ತು ಚಿಕ್ಕಮಗಳೂರಿನಯಲ್ಲಿ ರಾಜ್ಯದಲ್ಲಿಯೇ ಅಧಿಕ 5 ಸೆಂ.ಮೀ. ಮಳೆ ಸುರಿಯಿತು. ಇದೇ ಅವಧಿಯಲ್ಲಿ ರಾಜ್ಯದ ವಿವಿಧೆಡೆ ಬಿದ್ದ ಮಳೆಯ ಪ್ರಮಾಣ ಹೀಗಿತ್ತು (ಸೆಂ.ಮೀ.ಗಳಲ್ಲಿ): ಹಾರಂಗಿ, ಜಯಪುರ 4, ಸೋಮವಾರಪೇಟೆ, ಹುಂಚದಕಟ್ಟೆ, ಶಿವಮೊಗ್ಗ, ಕಡೂರು, ಹೊಸದುರ್ಗ, ಕ್ಯಾಸಲ್‌ರಾಕ್ 3, ಕೊಟ್ಟಿಗೆಹಾರ, ಕಡೂರು 2, ಉಪ್ಪಿನಂಗಡಿ, ಪಣಂಬೂರು, ಕೊಲ್ಲೂರು ತಲಾ 1,ಬಾಗಲಕೋಟೆಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ 33.7 ಡಿಗ್ರೆ ಸೆಲಿÏಯಸ್, ಶಿರಾಲಿಯಲ್ಲಿ ಕನಿಷ್ಠ 18.6 ಡಿ.ಸೆ. ತಾಪಮಾನ ದಾಖಲಾಗಿದೆ.