Advertisement
ಮಳೆ ಸಂಬಂಧಿ ಅವಘಡಕ್ಕೆ ತೆಲಂಗಾಣದಲ್ಲಿ 3 ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಹಳ್ಳಿಗಳು ಭಾಗಶಃ ಮುಳುಗಡೆಯಾಗಿವೆ. ಆಂಧ್ರಪ್ರದೇಶದಲ್ಲಿ 13,227 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ. ತೆಲಂಗಾಣದ ಎಲದಲ ಜಿಲ್ಲೆಗಳಿಗೂ ಆರೆಂಜ್ ಮತ್ತು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ತೆಲಂಗಾಣ ರಾಜಧಾನಿ ಹೈದರಾಬಾದ್‌ನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
Related Articles
Advertisement
110 ಹಳ್ಳಿಗಳ ಮುಳುಗಡೆ
ತೆಲಂಗಾಣದಲ್ಲಿ ಭಾರೀ ಮಳೆಯ ಕಾರಣದಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, 110 ಹಳ್ಳಿಗಳು ಭಾಗಶಃ ಮುಳುಗಡೆಯಾಗಿವೆ. ಈ ಹಳ್ಳಿಗಳಲ್ಲಿ 100ಕ್ಕೂ ಹೆಚ್ಚು ಮಂದಿ ಮನೆಗಳ ಛಾವಣಿಗಳ ಮೇಲೆ ಕುಳಿತು ರಕ್ಷಣೆಗಾಗಿ ಕಾಯುತ್ತಿದ್ದಾರೆ. ಪ್ರವಾಹದಲ್ಲಿ ಕೊಚ್ಚಿ ಹೋಗಿ ಓರ್ವ ಮಹಿಳೆ ಸಾವಿಗೀಡಾಗಿದ್ದಾರೆ. 3 ಮಂದಿ ಕೊಚ್ಚಿಹೋಗಿ ರುವ ಶಂಕೆ ವ್ಯಕ್ತಪಡಿಸಲಾಗಿದೆ.
ಈ ತಿಂಗಳು ಪ್ರತೀ ವಾರ ವಾಯುಭಾರ ಕುಸಿತ?
ಆಗಸ್ಟ್‌ನಲ್ಲಿ ದೇಶದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾದಂತೆಯೇ ಸೆಪ್ಟಂಬರ್‌ನಲ್ಲೂ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಅದರಲ್ಲೂ ವಿಶೇಷವೆಂದರೆ, ಪ್ರಸಕ್ತ ತಿಂಗಳು ಪ್ರತಿ ವಾರವೂ ವಾಯುಭಾರ ಕುಸಿತವಾಗುವ ಸಾಧ್ಯತೆಯಿದೆ. ಸೆಪ್ಟಂಬರ್‌ನಲ್ಲಿ ಮಳೆಯು ದೀರ್ಘಾವಧಿ ಸರಾಸರಿಗಿಂತಲೂ ಶೇ.109ರಷ್ಟು ಹೆಚ್ಚಿರಲಿದೆ. ಸಾಮಾನ್ಯವಾಗಿ ಸೆಪ್ಟಂಬರಲ್ಲಿ 168 ಮಿ.ಮೀ. ಮಳೆಯಾಗುತ್ತದೆ. ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ, ರಾಜಸ್ಥಾನ ಹಾಗೂ ಪಂಜಾಬ್‌ನ ಹಲವೆಡೆ ಭಾರೀ ಮಳೆಯಾಗಲಿದೆ. ಪರಿಣಾಮವಾಗಿ ಭೂಕುಸಿತ, ಪ್ರವಾಹದ ಭೀತಿ ಇದ್ದು, ಈ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ಹೇಳಿದ್ದಾರೆ. ಅರಬಿ ಸಮುದ್ರ ಹಾಗೂ ಬಂಗಾಲ ಕೊಲ್ಲಿಗಳಲ್ಲಿ ಮುಂದಿನ ವಾರಗಳಲ್ಲಿ 2 ಚಂಡಮಾರುತಗಳು ಸೃಷ್ಟಿಯಾಗುವ ಸಾಧ್ಯತೆಯಿದೆ ಎಂದಿದ್ದಾರೆ.