Advertisement
ಪಟ್ಟಣದಿಂದ ಕೇವಲ 15 ಕಿ.ಮೀ ದೂರವಿರುವ ಕಾಮಸಮುದ್ರ ಹೋಬಳಿ ಕೇಂದ್ರಕ್ಕೆ ಹೋಗುವ ಮುಖ್ಯ ರಸ್ತೆ ಅರ್ಧದಷ್ಟು ಭಾಗ ಸಂಪೂರ್ಣ ಹಾಳಾಗಿ, ವಾಹನಗಳ ಸಂಚಾರಕ್ಕೆ ಸಂಚಕಾರ ತಂದಿದೆ. ಒಂಡೆದೆ ಲೋಕೋಪಯೋಗಿ ಇಲಾಖೆ ಅನುದಾನ ಕೊರತೆಯ ನಡುವೆಯೂ ಗ್ರಾಮೀಣ ರಸ್ತೆ ಹಾಗೂ ಪ್ರಮುಖ ರಸ್ತೆಗಳಿಗೆ ಡಾಂಬರು ಭಾಗ್ಯ ಕಾಣಿಸಿ, ರಸ್ತೆಗಳ ಗುಣಮಟ್ಟಕ್ಕೆ ಶ್ರಮಿಸುತ್ತಿದ್ದರೆ. ಮತ್ತೂಂದೆಡೆ ಗುತ್ತಿಗೆದಾರರ ಕಳಪೆ ಕಾಮಗಾರಿಯಿಂದ ಡಾಂಬರುಕಂಡ ರಸ್ತೆಗಳು, ಕೆಲವೇ ತಿಂಗಳಲ್ಲಿ ಮತ್ತೆ ಹಳೇ ಸ್ಥಿತಿಗೆ ಮರುಳುತ್ತಿರುವುದು ವಿಪರ್ಯಾಸವಾಗಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.
Related Articles
Advertisement
ಕಳಪೆ ಕಾಮಗಾರಿ ಕಂಡರೆ ಅಂತಹ ಗುತ್ತಿಗೆ ದಾರರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಹಲವು ಬಾರಿ ಶಾಸಕರು ಹೇಳಿದ್ದರೂ ಇದುವರೆಗೂ ಯಾವ ಗುತ್ತಿಗೆದಾರರು ಅಂತಹ ಪಟ್ಟಿಯಲ್ಲಿ ಹೆಸರು ಪಡೆದಿಲ್ಲ. ರಸ್ತೆಗಳು ಮಾತ್ರ ಕಳಪೆ ಕಾಮಗಾರಿಯಿಂದ ಕೂಡಿರುವುದು ಕಣ್ಣಿಗೆ ರಾಚುತ್ತಿದೆ. ಇನ್ನಾದರೂ ಅಧಿಕಾರಿಗಳು ಗುಣಮಟ್ಟದ ರಸ್ತೆಗಳಿಗೆ ಆದ್ಯತೆ ನೀಡಲಿ, ಅವ್ಯವಸ್ಥೆಯಿಂದ ಕೂಡಿರುವ ರಸ್ತೆಗಳಿಗೆ ಮೋಕ್ಷ ಕಲ್ಪಿಸಿ, ವಾಹನಗಳು ಮುಕ್ತವಾಗಿ ಸಂಚರಿಸಲು ಅನುವು ಮಾಡಿಕೊಡಲಿ ಎಂಬುದು ವಾಹನ ಸವಾರರು ಒತ್ತಾಯಿಸಿದ್ದಾರೆ.
ಹಲವು ಬಾರಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇದೊಂದೇ ಸ್ಥಳದಲ್ಲಿ ತೇಪೇ ಕೆಲಸ ಮಾಡಿದ್ದರೂ ಪ್ರಯೋಜನವಾಗುತ್ತಿಲ್ಲ. ಈ ಜಾಗದಲ್ಲಿ ಹಲವು ಬಾರಿ ಅಪಘಾತಗಳು ಸಂಭವಿ ಸಿದ್ದರೂ ಇದುವರೆಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಸಾರ್ವಜನಿಕರು ಹೇಳಿ ಹೇಳಿ ಸಾಕಾಗಿದೆ.●ಕೆ.ಎಂ.ಮಂಜುನಾಥ್,
ಮಾಜಿ ಅಧ್ಯಕ್ಷ, ಕೆಸರನಹಳ್ಳಿ ಗ್ರಾಪಂ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿಗೆ 8 ಕೋಟಿ ಅನುದಾನ ಬಿಡುಗಡೆಯಾಗಿದೆ. ಈ ರಸ್ತೆ ಅಭಿವೃದ್ಧಿಯನ್ನು ಲೋಕೋಪಯೋಗಿ ಇಲಾಖೆಯ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಎಸ್‌ಎಚ್‌ಡಿಪಿ) ಇವರು ನಿರ್ವಹಣೆ ಮಾಡಲಿದ್ದಾರೆ. ಈ ಕಾಮಗಾರಿಯು ಶೀಘ್ರದಲ್ಲೇ ಆರಂಭಗೊಳ್ಳಲಿದೆ.
●ಎಂ.ಸರಸ್ವತಿ, ಎಇಇ, ಲೋಕೋಪಯೋಗಿ
ಇಲಾಖೆ, ಬಂಗಾರಪೇಟ ●ಎಂ.ಸಿ.ಮಂಜುನಾಥ್