Advertisement
ಈ ಬಾರಿಯ ನೈಋತ್ಯ ಮಾನ್ಸೂನ್ ಬಹುತೇಕ ಸಾಮಾನ್ಯವಾಗಿರಲಿದ್ದು, ಎಲ್ ನಿನೋ ಪ್ರಭಾವ ಕಂಡುಬರುವ ಸಾಧ್ಯತೆ ಕಡಿಮೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ದೇಶದ ಬಹುತೇಕ ಭಾಗದಲ್ಲಿ ನೈಋತ್ಯ ಮಾನ್ಸೂನ್ ಆಧರಿಸಿ ಕೃಷಿ ಚಟುವಟಿಕೆ ನಡೆಯಲಿದ್ದು, ಈ ಬಾರಿ ಶೇ. 96ರಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿರುವುದು ದೇಶದ ರೈತ ಸಮುದಾಯ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ. ಕಳೆದ ವಾರವಷ್ಟೇ ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಟಿಸಿದ ವರದಿಯಲ್ಲಿ ಈ ಬಾರಿ ಎಲ್ ನಿನೋ ಪ್ರಭಾವ ಇರಲಿದ್ದು, ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಲಿದೆ ಎಂದು ಹೇಳಿತ್ತು.
ಜೂನ್ ತಿಂಗಳಲ್ಲಿ ಎಲ್ ನಿನೋ ಪ್ರಭಾವವು ಸ್ವಲ್ಪ ಮಟ್ಟಿಗೆ ಕಾಣಿಸಿಕೊಳ್ಳಲಿದೆಯಾದರೂ, ಜುಲೈನಿಂದ ಮುಂಗಾರು ಚುರುಕಾಗಲಿದೆ ಎಂದು ರಾಜೀವ್ ಮಾಹಿತಿ ನೀಡಿದ್ದಾರೆ. ದೇಶದ ಹಲವು ಭಾಗಗಳು ಕೃಷಿ ಸಂಬಂಧಿ ಬಿಕ್ಕಟ್ಟು ಎದುರಿಸುತ್ತಿದ್ದು, ಈ ಬಾರಿ ಉತ್ತಮ ಮಳೆಯಾಗುವ ಕಾರಣ ರೈತ ಸಮುದಾಯದ ಸಮಾಧಾನ ಪಡಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.