ರಾಯ್ಪುರ: ಸರಣಿಯ ಮೊದಲ ಪಂದ್ಯ ಗೆದ್ದು ಉತ್ಸಾಹದಲ್ಲಿರುವ ಟೀಂ ಇಂಡಿಯಾ ಇಂದು ಎರಡನೇ ಚಾಲೆಂಜ್ ಗೆ ಸಿದ್ದವಾಗಿದೆ. ರಾಯ್ಪುರದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದ್ದಾರೆ.
ರಾಯ್ಪುರದ ಶಹೀದ್ ವೀರನಾರಾಯಣ ಸಿಂಗ್ ಕ್ರಿಕೆಟ್ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿದೆ. ಇದುವರೆಗೆ ಐಪಿಎಲ್ ಮತ್ತು ರೋಡ್ ಸೇಫ್ಟಿ ಪಂದ್ಯಗಳಿಗೆ ಆತಿಥ್ಯ ವಹಿಸಿದ್ದ ರಾಯ್ಪುರ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಪಂದ್ಯಕ್ಕೆ ಆತಿಥ್ಯ ವಹಿಸುತ್ತಿದೆ. ಇದು ಏಕದಿನ ಪಂದ್ಯ ನಡೆದ ಭಾರತದ 50ನೇ ಮೈದಾನ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.
ಹೈದರಾಬಾದ್ ನಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಭಾರತ ತಂಡವು ಗಿಲ್ ದ್ವಿಶತಕದ ನೆರವಿನಿಂದ 349 ರನ್ ಗಳಿಸಿದ್ದರೆ, ಕಿವೀಸ್ ಬ್ರೇಸ್ ವೆಲ್ ಸ್ಪೋಟಕ ಶತಕದ ನೆರವಿನಿಂದ 337 ರನ್ ವರೆಗೆ ಬಂದಿತ್ತು. ಭಾರತವು 12 ರನ್ ಅಂತರದ ರೋಚಕ ಗೆಲುವು ಸಾಧಿಸಿದೆ.
ಇದನ್ನೂ ಓದಿ:‘ನಿನಗೆ ಒಳ್ಳೆಯ ಭವಿಷ್ಯವಿದೆ..’ ಯುಜುವೇಂದ್ರ ಚಾಹಲ್ ಕಾಲೆಳೆದ ರೋಹಿತ್ ಶರ್ಮಾ
Related Articles
ಇಂದಿನ ಪಂದ್ಯದಲ್ಲಿ ಉಬಯ ತಂಡಗಳಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ.
ಭಾರತ: ರೋಹಿತ್ ಶರ್ಮಾ (ನಾ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿ.ಕೀ), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ನ್ಯೂಜಿಲ್ಯಾಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾ/ವಿ.ಕೀ), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್