ರಾಯಚೂರು: ಅಂತರ್ಜಲ ವೃದ್ಧಿಗೆ ಜಿಲ್ಲೆಯ ಜನರಲ್ಲಿ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಪಂ ಉಪಕಾರ್ಯದರ್ಶಿ ಮಹ್ಮದ್ ಇಸ್ಮಾಯಿಲ್ ತಿಳಿಸಿದರು. ಜಿಪಂ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಫೌಂಡೇಶನ್ ಫಾರ್ ಇಕಲಾಜಿಕಲ್ ಸೆಕ್ಯೂರಿಟಿ ಸಹಯೋಗದಲ್ಲಿ ಮಹಾತ್ಮಗಾಂ ಧಿ ನರೇಗಾ ಯೋಜನೆಯಡಿ ಅಂತರ್ಜಲ ಚೇತನ ಯೋಜನೆ ಕುರಿತು ಜಿಲ್ಲಾಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಅಂತರ್ಜಲ ವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕಾರ್ಯಾಗಾರ ಆಯೋಜಿಸಿದ್ದು, ಸಂಪನ್ಮೂಲ ವ್ಯಕ್ತಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಪೂರಕವಾಗಿ ಕೆಲಸ ಮಾಡಬೇಕು. 2006ರಿಂದ ಈವರೆಗೂ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಕೂಲಿ ಕಾರ್ಮಿಕರಿಗೆ ಬದು ನಿರ್ಮಾಣ, ಗೋಕಟ್ಟೆ ಹಗೂ ಕೆರೆಗಳ ಹೊಳುತ್ತೆವ ಕೆಲಸ ನೀಡುವುದರ ಜೊತೆಗೆ ಇದೀಗ ಅಂತರ್ಜಲ ಚೇತನ ಕಾರ್ಯಕ್ರಮ ನಿರ್ವಹಿಸಲು ರಾಜ್ಯ ಸರ್ಕಾರದ ನಿರ್ದೇಶನ
ಬಂದಿದೆ ಎಂದು ವಿವರಿಸಿದರು.
ನೀರನ್ನು ಮಿತವಾಗಿ ಬಳಸಬೇಕು. ಇಲ್ಲದಿದ್ದರೆ ಮುಂದಿನ ಪೀಳಿಗೆಯ ಜನ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ನೂರಾರು ಅಡಿ ಕೊಳವೆಬಾವಿ ಕೊರೆದರು ಅಂತರ್ಜಲ ಸಿಗುತ್ತಿಲ್ಲ. ಇದರಿಂದ ಅಂತರ್ಜಲ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕರೆ ನೀಡಿದರು. ಜಿಪಂ ಮುಖ್ಯ ಯೋಜನಾಧಿಕಾರಿ ಡಾ| ಟಿ.ರೋಣಿ ಮಾತನಾಡಿದರು. ಕಾರ್ಯಪಾಲಕ ಅಭಿಯಂತರ ಗಣಪತಿ ಸಾಕ್ರೆ, ಫೌಂಡೇಶನ್ ಫಾರ್ ಇಕಲಾಜಿಕಲ್ ಸೆಕ್ಯೂರಿಟಿ ವ್ಯವಸ್ಥಾಪಕ ರಾಘವೇಂದ್ರ ಎಚ್.ಜಿ., ಲೋಕೇಶ ಸೇರಿ ಇತರರಿದ್ದರು.