ಚಿಕ್ಕಬಳ್ಳಾಪುರ: ಎಚ್‌ಐವಿ ಸೋಂಕಿತರ ನಿಯಂತ್ರಣ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರು ಹಾಗೂ ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಭೈರಪ್ಪ ಶಿವಲಿಂಗ ನಾಯಿಕ ತಿಳಿಸಿದರು.
ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣಾ ಘಟಕ, ಜಿಲ್ಲಾಕ್ಷಯರೋಗ ನಿಯಂತ್ರಣಾ ಘಟಕ, ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರೆಡ್ ರಿಬ್ಬನ್‌ಕ್ಲಬ್, ಸ್ವಯಂ ಸೇವಾ ಸಂಘ-ಸಂಸ್ಥೆಗಳು, ಚಿಕ್ಕಬಳ್ಳಾಪುರ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ “ಜಾಗತಿಕ ಒಗ್ಗಟ್ಟು ಜವಾಬ್ದಾರಿಯ ಹಂಚಿಕೆ’ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಲಾಗಿದ್ದ ವಿಶ್ವ ಏಡ್ಸ್ ದಿನಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಜಾಥಾ ಕಾರ್ಯಕ್ರಮಗಳ ಮೂಲಕ ಎಚ್‌ಐವಿ ಹಾಗೂ ಏಡ್ಸ್ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸಿಕೊಂಡು ಮಾರಕ ಏಡ್ಸ್ ರೋಗ ತಡೆಗಟ್ಟಲು ಆರೋಗ್ಯ ಇಲಾಖೆ ಹಮ್ಮಿಕೊಳ್ಳಲಾಗುವ ಮುನ್ನೆಚ್ಚರಿಕಾ ಕ್ರಮಗಳಿಗೆ ಸಾರ್ವಜನಿಕರು ಸ್ಪಂದಿಸಿ ಮುಂಜಾಗ್ರತೆ ಅನುಸರಿಸಿದರೆ ಏಡ್ಸ್ ಸಂಪೂರ್ಣವಾಗಿ ನಿಯಂತ್ರಿಸಲು ಸಾಧ್ಯವಾಗಲಿದೆ ಎಂದರು. ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿ, ಎಚ್‌ವಿ ರೋಗ ಹರಡದಂತೆ ಎಚ್ಚರ ವಹಿಸಬೇಕಾಗಿದೆ. ಇಂತಹಕಾರ್ಯಕ್ರಮಗಳಿಗೆ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ಒಗ್ಗೂಡಿ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.
ಜಿಪಂ ಸಿಇಒ ಪಿ.ಶಿವಶಂಕರ್ ಮಾತನಾಡಿ, ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಜಾಗƒತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಮತ್ತು ಪ್ರಾಥಮಿಕ ಆರೋಗ್ಯಕೇಂದ್ರಗಳಲ್ಲಿ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ಲಭ್ಯವಿದ್ದು, ಇದರ ಲಾಭ ಪಡೆದುಕೊಳ್ಳಬೇಕೆಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಚ್.ದೇವರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾ ಆರ್‌ಕಬಾಡೆ, ಜಿಲ್ಲಾಕ್ಷಯರೋಗ ಮತ್ತು ಏಡ್ಸ್ ನಿರ್ಮೂಲನಾಕಾರ್ಯ ಕ್ರಮಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ರಮೇಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹರೀಶ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.