Advertisement

ಮಕ್ಕಳಿಗೆ ಹಕ್ಕುಗಳ ಜಾಗೃತಿ ಮೂಡಿಸಿ: ನ್ಯಾ|ಶ್ರೀನಿವಾಸ

12:25 PM Sep 24, 2019 | Suhan S |

ಕೊಪ್ಪಳ: ಮಕ್ಕಳ ಹಕ್ಕುಗಳ ಪೋಷಣೆ ಹಾಗೂ ರಕ್ಷಣೆಯ ಬಗ್ಗೆ ಮಕ್ಕಳಿಗೆ ಜಾಗೃತಿ ಮೂಡಿಸಿ, ಮಕ್ಕಳು ಯಾವುದೇ ರೀತಿಯ ದೌರ್ಜನ್ಯ, ಕಿರುಕುಳಕ್ಕೆ ಒಳಗಾಗದಂತೆ ಮಾಡಬೇಕು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಟಿ. ಶ್ರೀನಿವಾಸ ಅವರು ಹೇಳಿದರು.

Advertisement

ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಸೇರಿ ವಿವಿಧ ಇಲಾಖೆಗಳ ಆಶ್ರಯದಲ್ಲಿ ನಗರದ ಗವಿಸಿದ್ದೇಶ್ವರ ಉಚಿತ ವಸತಿ ಮತ್ತು ಪ್ರಸಾದ ನಿಲಯದಲ್ಲಿ ನಡೆದ ಕಾನೂನು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶೈಕ್ಷಣಿಕ ಉದ್ದೇಶಕ್ಕಾಗಿ, ಪೋಷಣೆ ಮತ್ತು ರಕ್ಷಣೆಗಾಗಿ ಅಥವಾ ಇನ್ನಾವುದೋ ಕಾರಣಕ್ಕಾಗಿ, ಕೌಟುಂಬಿಕ ವಾತಾವರಣದಿಂದ ಮಕ್ಕಳು ಸಾಂಸ್ಥಿಕ ಪೋಷಣೆಗಾಗಿ ವಿವಿಧ ಪಾಲನಾ ಸಂಸ್ಥೆಗಳಿಗೆ ದಾಖಲಾಗುತ್ತಿದ್ದಾರೆ.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ಶೈಕ್ಷಣಿಕ ಸಂಸ್ಥೆಗಳಲ್ಲಿ ಮಕ್ಕಳಿಗೆ ಲೈಂಗಿಕ ಕಿರುಕುಳ, ದೈಹಿಕ ಹಿಂಸೆ ನೀಡಿರುವ ಪ್ರಕರಣಗಳು ಮತ್ತು ವಸತಿ ನಿಲಯದ ಮಕ್ಕಳನ್ನು ಕೆಲ ವ್ಯಕ್ತಿಗಳು ಲೈಂಗಿಕ ದೌರ್ಜನ್ಯಕ್ಕೆ ಬಳಸಿಕೊಂಡ ಪ್ರಕರಣಗಳು ವರದಿಯಾಗಿವೆ ಎಂದರು. ಸಾಂಸ್ಥಿಕ ಪೋಷಣೆಯಲ್ಲಿರುವ ಮಕ್ಕಳು ಮೇಲೆಯು ಸಹ, ಸಂಸ್ಥೆಯಲ್ಲಿನ ಅಧಿಕಾರಿ, ಸಿಬ್ಬಂದಿ, ವ್ಯವಸ್ಥಾಪನಾ ಸಮಿತಿ, ಆಡಳಿತ ಮಂಡಳಿಗಳಿಂದ ವಿವಿಧ ರೀತಿಯ ಕಿರುಕುಳ, ದೌರ್ಜನ್ಯಕ್ಕೆ ಒಳಗಾಗುವ ಸಾಧ್ಯತೆಯಿದ್ದು, ಆದ್ದರಿಂದ ಪೋಷಣೆ ಮತ್ತು ರಕ್ಷಣೆಯಲ್ಲಿರುವ ಮಕ್ಕಳಿಗೂ ಸಹ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಮೂಡಿಸಿ, ಮಕ್ಕಳು ಯಾವುದೇ ರೀತಿಯ ದೌರ್ಜನ್ಯ, ಕಿರುಕುಳಕ್ಕೆ ಒಳಗಾಗದಂತೆ ಮಾಡುವುದು. ಬಾಧಿತರಿಗೆ, ನೊಂದವರಿಗೆ, ಕಾನೂನು ಸೇವಾ ಪ್ರಾ ಧಿಕಾರದಿಂದ, ಕಾನೂನು ನಾತ್ಮಕ ರೀತಿಯ ಯಾವುದೇ ನೆರವು ಬೇಕಾದರೆ, ಜಿಲ್ಲಾ ಕಾನೂನು ಸೇವಾ ಪ್ರಾಧಿ  ಕಾರವನ್ನು ಅಥವಾ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಬಹುದೆಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಈರಣ್ಣ ಪಂಚಾಳ್‌ ಮಾತನಾಡಿ, ಮಕ್ಕಳು, ಮಕ್ಕಳ ಕಲ್ಯಾಣ ಸಮಿತಿಯಿಂದ ಪೋಷಣೆ ಮತ್ತು ರಕ್ಷಣೆಗಾಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲಾದ ಮಕ್ಕಳಿಗೆ, ಕೇಂದ್ರ ಸರಕಾರವು ಉನ್ನತಿ-ಶಿಷ್ಯವೇತನ ಎಂಬ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯ ಮುಖ್ಯ ಉದ್ದೇಶ, ಮಕ್ಕಳ ಪಾಲನಾ ಕೇಂದ್ರಗಳಲ್ಲಿನ ಮಕ್ಕಳಿಗೂ ಗುಣಾತ್ಮಕ ಶಿಕ್ಷಣ ನೀಡುವುದಾಗಿದ್ದು, ಪಾಲನಾ ಕೇಂದ್ರಗಳಲ್ಲಿನ ಸೌಲಭ್ಯಗಳನ್ನು ಉತ್ತಮಪಡಿಸುವ ಮೂಲಕ ಮಕ್ಕಳ ಬೆಳವಣಿಗೆಯನ್ನು ಸಾಧಿ ಸುವುದಾಗಿದೆ ಎಂದರು.

ಯುನಿಸೆಫ್‌-ಮಕ್ಕಳ ರಕ್ಷಣಾ ಯೋಜನೆಯ ಹರೀಶ ಜೋಗಿ ಮಾತನಾಡಿ, ಮಕ್ಕಳಿಗೆ ಮಕ್ಕಳ ಹಕ್ಕುಗಳ ಬಗ್ಗೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012 ಮತ್ತು ತಿದ್ದುಪಡಿ ಕಾಯ್ದೆ-2019ರ ಕುರಿತು ಮಾಹಿತಿಯನ್ನು ನೀಡಿದರು. ರಾಮನಗೌಡ್ರ ಬಾಳನಗೌಡ್ರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಾಜ ಕಾರ್ಯಕರ್ತ ರವಿಕುಮಾರ ಪವಾರ ಪ್ರಾಸ್ತಾವಿಕ ಮಾತನಾಡಿದರು. ಗವಿಸಿದ್ದಪ್ಪ ಹತ್ತಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next