ಮಂಡ್ಯ: ಚೈಲ್ಡ್‌ಲೈನ್-1098 ದಿನದ 24 ಗಂಟೆಗಳ ತುರ್ತು ಉಚಿತ ದೂರವಾಣಿ ಸೇವೆಯಾಗಿದ್ದು, ಸಂಕಷ್ಟದಲ್ಲಿರುವ ಮಕ್ಕಳ ಮನಸ್ಥಿತಿಯನ್ನು ಮನಗೊಂಡು ಅವರ ಪಾಲನೆ, ಪೋಷಣೆ ಮತ್ತು ರಕ್ಷಣೆಯನ್ನು ಒದಗಿಸುವ ಪ್ರಮುಖ ಕರೆಯಾಗಿದೆ.
ಈ ಯೋಜನೆಯ ಬಗ್ಗೆ ಗ್ರಾಮೀಣ ಮಟ್ಟದಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚೈಲ್ಡ್‌ಲೈನ್ 1098 ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಯಲ್ಲಿ ಈ ವರ್ಷ 441 ಪ್ರಕರಣಗಳು ನೋಂದಣಿಯಾಗಿದೆ. 18 ವರ್ಷದೊಳಗಿನ ಸಂಕಷ್ಟದಲ್ಲಿರುವ ಅನಾಥ ಮಕ್ಕಳು, ನಿರ್ಗತಿಕ ಮಕ್ಕಳು, ಕಾಣೆಯಾದ ಮಕ್ಕಳು, ಶೋಷಣೆ, ಹಿಂಸೆ ಅತ್ಯಾಚಾರಕ್ಕೆ ಒಳಗಾದ ಮಕ್ಕಳು, ಮಾನಸಿಕ ಮತ್ತು
ಬುದ್ಧಿಮಾಂದ್ಯ ವಿಕಲಚೇತನ ಮಕ್ಕಳ ಕುಂದುಕೊರತೆಗಳು, ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪದ್ಧತಿ ಕುರಿತು ಅರಿವು ಮೂಡಿಸಲು ಅಧಿಕಾರಿಗಳು ಹಾಗೂ ಸ್ವಯಂ ಸಂಸ್ಥೆಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಮಕ್ಕಳ ಗ್ರಾಮ ಸಭೆ ಕಡ್ಡಾಯ: ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಚೈಲ್ಡ್‌ಲೈನ್ ಕುರಿತು ಗೋಡೆಬರಹ ಬರೆಸಲು ಹಾಗೂ ಮಕ್ಕಳ ಗ್ರಾಮ ಸಭೆಯನ್ನು ಕಡ್ಡಾಯವಾಗಿ ನಡೆಸಿ ಅಲ್ಲಿ ಬಾಲ್ಯ ವಿವಾಹ, ಬಾಲ ನ್ಯಾಯ ಕಾಯ್ದೆ ಹಾಗೂ ಚೈಲ್ಡ್‌ಲೈನ್ ಯೋಜನೆಯ ಬಗ್ಗೆ ಜಾಗೃತಿ ಮೂಡಿಸಬೇಕು. ಭಿಕ್ಷಾಟನೆ ಮುಕ್ತ ಜಿಲ್ಲಾಯನ್ನಾಗಿಸಲು ಅಧಿಕಾರಿ ಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳ ಬೇಕು. ಈ ನಿಟ್ಟಿನಲ್ಲಿ ಭಿಕ್ಷಾಟನೆ ಮಾಡುತ್ತಿ ರುವ ಮಕ್ಕಳನ್ನು ಗುರುತಿಸಿ ಅವರನ್ನು ಬಾಲಮಂದಿರದಲ್ಲಿ ಬಿಟ್ಟು ಅವರ ಪೋಷಕರಿಗೆ ಕೌನ್ಸಿಲಿಂಗ್ ಮಾಡಿ ಭಿಕ್ಷಾಟನೆ ಮಕ್ಕಳ ಪುನರ್ವಸತಿ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಮಕ್ಕಳ ರಕ್ಷಣಾ ನೀತಿಯನ್ನು ಎಲ್ಲಾ ಶಾಲೆಗಳಲ್ಲಿ ಕಟ್ಟುನಿಟ್ಟಿನ ಅನುಷ್ಠಾನಗೊಳಿಸ ಬೇಕು. ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಚೈಲ್ಡ್‌ಲೈನ್ 8 ಕುರಿತ ಮಾಹಿತಿಯನ್ನು ಗೋಡೆಬರಹದ ಮೂಲಕ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಅತಿ ಹೆಚ್ಚು ಬಾಲ್ಯ ವಿವಾಹಗಳು, ಹೆಣ್ಣು ಮಕ್ಕಳು ಕಾಣೆಯಾಗುತ್ತಿರುವುದು ಕಂಡುಬರುತ್ತಿದ್ದು, ಈ ನಿಟ್ಟಿನಲ್ಲಿ ಹದಿಹರೆಯದ ಮಕ್ಕಳಿಗೆ ಶಾಲಾ ಕಾಲೇಜಿನಲ್ಲಿ ಅರಿವು ಮೂಡಿಸುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೆಶಕರಾದ ರಾಜಮೂರ್ತಿ, ಚೈಲ್ಡ್ಲೈ ನ್ ಫೌಂಡೇಷನ್‌ನ ಜೆನಿಫರ್, ಬರ್ಡ್ಸ್ ಸಂಸ್ಥೆಯ ಮಕ್ಕಳ ಸಹಾಯವಾಣಿ ನಿರ್ದೆಶಕ ಮಿಕ್ಕರೆ ವೆಂಕಟೇಶ್ ಹಾಗೂ ಜಿಲ್ಲಾ ಮಟ್ಟದಅಧಿಕಾರಿಗಳು ಹಾಜರಿದ್ದರು.