Advertisement
ಬೆಂಗಳೂರು ಬಂದ್‌ಗೆ ಮಂಡ್ಯದಿಂದ ಹಿತರಕ್ಷಣ ಸಮಿತಿ ನಿಯೋಗ ತೆರಳಿ ಬೆಂಬಲ ವ್ಯಕ್ತಪಡಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಸರಕಾರದ ನಡೆಯನ್ನು ನೋಡಿಕೊಂಡು ಪ್ರತಿಭಟನೆ ತೀವ್ರತೆ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ ಎಂದು ಸಮಿತಿಯ ಸಂಘಟನ ಕಾರ್ಯದರ್ಶಿ ಸುನಂದ ಜಯರಾಂ ಹೇಳಿದರು.
Related Articles
ಸೆ.29ರಂದು ಬೆಂಗಳೂರು-ಮೈಸೂರು ಹೆದ್ದಾರಿ ತಡೆ ಗೆ ಯೋಜನೆ ರೂಪಿಸಲಾಗಿದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.
ರಾಮನಗರಲ್ಲೂ ಬಂದ್ ಬೆಂಗಳೂರು ಬಂದ್ ದಿನವೇ ರಾಮನಗರ ಜಿಲ್ಲೆಯಲ್ಲೂ ಬಂದ್ ಆಚರಿಸಲು ರವಿವಾರ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.
Advertisement
ಎಚ್.ಡಿ.ಕುಮಾರಸ್ವಾಮಿ ಎರಡು ಬಾರಿ ಆಡಳಿತ ನಡೆಸಿದ್ದು, ಕಾನೂನಾತ್ಮಕ ವಿಚಾರವನ್ನು ತಿಳಿದವರು. ಹೀಗಿ ದ್ದರೂ ರಾಜಕೀಯದ ಮಾತುಗಳನ್ನಾಡುತ್ತಾರೆ. ಸು. ಕೋ.ನ ಲ್ಲಿ ಸೆ.27ರಂದು ಕಾವೇರಿ ವಿಚಾರ ಮತ್ತೆ ವಿಚಾರಣೆಗೆ ಬರುವುದರಿಂದ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ.-ಡಾ| ಎಚ್.ಸಿ.ಮಹದೇವಪ್ಪ, ಸಮಾಜ ಕಲ್ಯಾಣ ಸಚಿವ ಸದ್ಯ ಅಣೆಕಟ್ಟಿನಲ್ಲಿ ನೀರು ಎಷ್ಟಿದೆ ಎಂಬ ಮಾಹಿತಿ ಸುಪ್ರೀಂಕೋರ್ಟ್‌ಗೂ ಇದೆ. ಡ್ಯಾಂನಲ್ಲಿ ನೀರು ಇಲ್ಲದಾಗ ಏನು ಮಾಡಬೇಕು ಎಂಬುದಕ್ಕೆ ಸಂಕಷ್ಟ ಸೂತ್ರ ಮಾಡಬೇಕು. 9 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿಯವರು ಈ ಸೂತ್ರ ಯಾಕೆ ಮಾಡುತ್ತಿಲ್ಲ? ಪ್ರಧಾನಿ ಮೋದಿ ಯಾಕೆ ಒಂದು ಸಭೆಯನ್ನೂ ಮಾಡುತ್ತಿಲ್ಲ. ರಾಜ್ಯದ ಮುಖ್ಯಮಂತ್ರಿಗಳನ್ನು ಕರೆದು ಚರ್ಚಿಸಬಹುದಿತ್ತು.
-ರಾಮಲಿಂಗಾರೆಡ್ಡಿ, ಸಾರಿಗೆ ಸಚಿವ ಕಾವೇರಿ ವಿವಾದದ ಆರಂಭದಿಂದಲೂ ಕಾವೇರಿ ನ್ಯಾಯಮಂಡಳಿ ಹಾಗೂ ಸರ್ವೋಚ್ಚ ನ್ಯಾಯಾಲಯದ ತೀರ್ಪು ಗಳು ರಾಜ್ಯದ ವಿರುದ್ಧವಾಗಿಯೇ ಬಂದಿವೆ. ನಮ್ಮ ರೈತರ ಹಿತವನ್ನು ಬಲಿಕೊಟ್ಟು ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲವೆಂದು ದಿಲ್ಲಿಯಲ್ಲಿ ನಡೆದ ರಾಜ್ಯದ ಸಂಸದರು ಹಾಗೂ ಕೇಂದ್ರ ಸಚಿವರ ಸಭೆಯಲ್ಲಿ ತಿಳಿಸಿದ್ದೇವೆ.
-ಎನ್.ಚಲುವರಾಯಸ್ವಾಮಿ, ಕೃಷಿ ಸಚಿವ ಬಂದ್‌ಗೆ ಬಿಜೆಪಿ ಬೆಂಬಲ: ರವಿ
ಬೆಂಗಳೂರು: ರಾಜ್ಯದಲ್ಲಿ ಬರಗಾಲವಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಬೆಂಗಳೂರಿನ ಕುಡಿಯುವ ನೀರಿನ ಪರಿಸ್ಥಿತಿಯೂ ಬಿಗಡಾಯಿಸಲಿದೆ. ಹಾಗಿದ್ದರೂ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಖಂಡನೀಯ. ಈ ಸಂಬಂಧ ವಿವಿಧ ಸಂಘಟನೆಗಳು ಕರೆ ನೀಡಿರುವ ಮಂಗಳವಾರದ ಬೆಂಗಳೂರು ಬಂದ್ ಅನ್ನು ಬಿಜೆಪಿ ಬೆಂಬಲಿಸಲಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ತಿಳಿಸಿದರು. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ರಾಜ್ಯದ ಹಿತಾಸಕ್ತಿ ಮುಖ್ಯ ಎಂಬುದನ್ನು ನಮ್ಮ ನಾಯಕರಾದ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಕಬ್ಬು ಬೆಳೆಗಾರರ ಸಂಘಟನೆ ನೇತೃತ್ವದಲ್ಲಿ ಕೆಲವು ಸಂಘಟನೆಗಳು ಬಂದ್‌ಗೆ ಕರೆ ಕೊಟ್ಟಿವೆ. ಇದನ್ನು ಬಿಜೆಪಿ ಬೆಂಬಲಿಸಲಿದ್ದು, ನಮ್ಮೆಲ್ಲ ಕಾರ್ಯಕರ್ತರು ಇದರಲ್ಲಿ ಭಾಗವಹಿಸುತ್ತಾರೆ. ಬೆಂಗಳೂರಿನ ಶಾಂತಿಯನ್ನು ಕಾಪಾಡಿಕೊಂಡು ಚಳವಳಿಯಲ್ಲಿ ಪಾಲ್ಗೊಳ್ಳಲು ಕರೆ ನೀಡಿದರು. ಕಾಂಗ್ರೆಸ್ಸಿನ ಹೈಕಮಾಂಡ್ ಮೆಚ್ಚುಗೆ ಪಡೆಯಲು ಕೇಳುವ ಮೊದಲೇ ನೀವು ನೀರು ಬಿಟ್ಟಿದ್ದೀರಲ್ಲವೇ? ಇಂಡಿಯ ಮೈತ್ರಿಕೂಟವನ್ನು ಗಟ್ಟಿಯಾಗಿ ಉಳಿಸಿಕೊಳ್ಳಲು ರಾಜ್ಯದ ಜನರ ಹಿತವನ್ನು ಬಲಿ ಕೊಟ್ಟಿದ್ದಾರೆ. ಸಾಕಷ್ಟು ನೀರಿದ್ದರೆ ಯಾರೂ ಪ್ರಶ್ನಿಸುತ್ತಿರಲಿಲ್ಲ. ಇವರು ಕಾಕಾ ಪಾಟೀಲ್ ನಿನಗೂ ಫ್ರೀ ಎಂದಂತೆ ಸ್ಟಾಲಿನ್ ನಿನಗೂ ಫ್ರೀ ಎಂದು ನೀರು ಬಿಡುತ್ತಿದ್ದಾರೆ ಎಂದು ಸಿ.ಟಿ.ರವಿ ಹೇಳಿದರು.