Advertisement
ಮಂಗಳವಾರ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ಉತ್ಸವ ನಿಮಿತ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ವತಿಯಿಂದ ಜರುಗಿದ ಪೂರ್ವಭಾವಿ ಸಭೆಯಲ್ಲಿ ಯನ್ನುದ್ದೇಶಿಸಿ ಮಾತನಾಡಿ, ಉತ್ಸವವನ್ನು ಅದ್ದೂರಿಯಾಗಿ ಮಾಡುವ ಉದ್ದೇಶದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಹೆಚ್ಚಿನ ಅನುದಾನ ನೀಡಲು ಒತ್ತಾಯಿಸಲಾಗುವುದು ಎಂದರು.
Related Articles
Advertisement
ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಮಾತನಾಡಿ, ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು. ಉತ್ಸವದ ಕಾರ್ಯಕ್ರಮ ಅದ್ಧೂರಿಯಿಂದ ನಡೆಯಲು ಉಪ ಸಮಿತಿ ರಚಿಸಲಾಗುತ್ತಿದ್ದು, ಸಾರ್ವಜನಿಕರು ತಮ್ಮ ಹೆಸರು ನೋಂದಾಯಿಸಬೇಕು. ಉತ್ಸವದ ನಿಮಿತ್ತ ಗ್ರಾಮಸ್ಥರು ತಳಿರು ತೊರಣಗಳಿಂದ ಗ್ರಾಮವನ್ನು ಶೃಂಗರಿಸಬೇಕು ಎಂದರು. ಸಂಗೊಳ್ಳಿ ರಾಯಣ್ಣ ಪ್ರಶಸ್ತಿಯನ್ನು ನೀಡಿ ಗೌರವಿಸಬೇಕು. ಸ್ಥಳೀಯ, ತಾಲೂಕಿನ ಯೋಧರನ್ನು ಗೌರವಿಸಬೇಕು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಬೇಕು. ಉತ್ಸವದ ದಿನಗಳಲ್ಲಿ ಗ್ರಾಮಕ್ಕೆ ಹೆಚ್ಚಿನ ಬಸ್ ಸೌಕರ್ಯ ನೀಡಬೇಕು. ರಾಯಣ್ಣ ಅಭಿಮಾನಿಗಳನ್ನು ಗುರುತಿಸಿ ಸನ್ಮಾನಿಸಬೇಕು. ಕಲಾವಿದರಿಗೆ ಹಾಗೂ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಮಾಡಬೇಕು. ಹಿಂದಿನ ವರ್ಷ ಉತ್ಸವಕ್ಕೆ ಪೆಂಡಾಲ್, ಇತರ ವ್ಯವಸ್ಥೆ ಕಲ್ಪಿಸಿದವರ ಬಾಕಿ ಹಣ ಸಂದಾಯ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದರು.
ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ತಹಶೀಲ್ದಾರ್ ಡಾ.ದೊಡ್ಡಪ್ಪ ಹೂಗಾರ, ಜಿಪಂ ಸದಸ್ಯ ಅನಿಲ ಮೆಕಲಮರ್ಡಿ, ಸದಸ್ಯ ಗೌಸಸಾಬ ಬುಡ್ಡೆಮುಲ್ಲಾ, ಇಒ ಸಮೀರ ಮುಲ್ಲಾ, ಗ್ರಾಪಂ ಅಧ್ಯಕ್ಷೆ ಯಲ್ಲವ್ವ ಹಳೆಮನಿ, ಉಪಾಧ್ಯಕ್ಷ ಬಸವರಾಜ ಕೊಡ್ಲಿ, ಅರುಣ ಯಲಿಗಾರ, ಬಸವರಾಜ ಡೊಳ್ಳಿನ, ಸುನೀಲ ಕುಲಕರ್ಣಿ ಇತರರು ಇದ್ದರು.