Advertisement

17 ವರ್ಷದ ಹುಡುಗಿಯ ಮೇಲೆ 8 ಮಂದಿಯಿಂದ ಸಾಮೂಹಿಕ ಅತ್ಯಾಚಾರ

03:12 PM Oct 02, 2022 | Team Udayavani |

ಜೈಪುರ: ಎಂಟು ಮಂದಿ ಕಾಮುಕರು 17 ವರ್ಷದ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಆಕೆಯಿಂದ ಹಣ ವಸೂಲಿ ಮಾಡಿ ನಂತರ ಆಕೆಯ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವುದೇ ಬಂಧನವಾಗಿಲ್ಲ.

Advertisement

ಅಪ್ರಾಪ್ತೆಯ ಮೇಲೆ ಮೂರು ಬಾರಿ ಸಾಮೂಹಿಕ ಅತ್ಯಾಚಾರ ಎಸಗಿದ ಎಂಟು ಆರೋಪಿಗಳ ವಿರುದ್ಧ ಸೆಪ್ಟೆಂಬರ್ 29 ರಂದು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬಾಪು ಅನ್ಯಾಯದ ವಿರುದ್ಧ ದೇಶವನ್ನು ಒಗ್ಗೂಡಿಸಿದಂತೆ ನಾವು ಭಾರತವನ್ನು ಒಗ್ಗೂಡಿಸುತ್ತೇವೆ

”ಆರೋಪಿಗಳನ್ನು ಬಂಧಿಸಲು ಪ್ರಯತ್ನ ನಡೆಸಲಾಗುತ್ತಿದೆ. ಇಲ್ಲಿಯವರೆಗೆ ಯಾವುದೇ ಬಂಧನವಾಗಿಲ್ಲ ಎಂದು ಕಿಶನ್‌ಗಢ್ ಬಾಸ್ ವೃತ್ತಾಧಿಕಾರಿ ಅತುಲ್ ಅಗ್ರೆ ತಿಳಿಸಿದ್ದಾರೆ.

ಪ್ರಕರಣದ ಬಗ್ಗೆ ಬೆಳಕು ಚೆಲ್ಲಿರುವ ಪೊಲೀಸ್ ಠಾಣೆಯ ಎಸ್‌ಎಚ್‌ಒ ಅಮಿತ್ ಕುಮಾರ್, 17 ವರ್ಷದ ಸಂತ್ರಸ್ತೆಗೆ ಡಿಸೆಂಬರ್ 31, 2021 ರಂದು ಸಾಹಿಲ್‌ ಎಂಬಾತನಿಂದ ಕರೆ ಬಂದಿತ್ತು, ಆಕೆ ತನ್ನ ಕೆಲವು ಆಕ್ಷೇಪಾರ್ಹ ಚಿತ್ರಗಳನ್ನು ಹೊಂದಿದ್ದು, ತನ್ನನ್ನು ಭೇಟಿಯಾಗುವಂತೆ ಕೇಳಿಕೊಂಡಿದ್ದಾಳೆ ಎಂದು ಹೇಳಿದರು. ಅಲ್ಲಿಗೆ ತಲುಪಿದಾಗ ಅದೇ ಗ್ರಾಮದ ಇತರ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅದರ ನಂತರ ಜನವರಿ 3 ಮತ್ತು ಏಪ್ರಿಲ್ 6 ರಂದು ಬಾಲಕಿಯ ಮೇಲೆ ಎರಡು ಬಾರಿ ಅತ್ಯಾಚಾರ ನಡೆಸಲಾಯಿತು ಎಂದು ಅವರು ಹೇಳಿದ್ದಾರೆ.

Advertisement

“ಆರೋಪಿಗಳು ವಿಡಿಯೋಗಳನ್ನು ಚಿತ್ರೀಕರಿಸಿದ್ದಾರೆ ಮತ್ತು ಅದನ್ನು ಪ್ರಸಾರ ಮಾಡುವುದಿಲ್ಲ ಎಂದು 50 ಸಾವಿರ ರೂ. ಸುಲಿಗೆ ಮಾಡಿದ್ದಾರೆ.ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದು, ಕೊಡದಿದ್ದಾಗ ವಿಡಿಯೋವನ್ನು ಹರಿಬಿಟ್ಟಿದ್ದಾರೆ ಎಂದು ಬಾಲಕಿಯ ಕುಟುಂಬದವರು ಆರೋಪಿಸಿದ್ದಾರೆ.

ಆರೋಪಿಗಳೆಲ್ಲರೂ ಅದೇ ಗ್ರಾಮದ ನಿವಾಸಿಗಳು ಎಂದು ಎಸ್‌ಎಚ್‌ಒ ತಿಳಿಸಿದ್ದಾರೆ. ಇತರ ಆರೋಪಿಗಳನ್ನು ಜಾವೇದ್, ಅರ್ಬಾಜ್, ಅಕ್ರಮ್, ತಾಲೀಮ್, ಮುಸ್ತಾಕಿಮ್, ಸಲ್ಮಾನ್ ಮತ್ತು ಅಕ್ರಮ್ ಎಂದು ಗುರುತಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next