Advertisement

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ​​​​​​​

06:45 AM May 19, 2018 | Team Udayavani |

ಬೆಂಗಳೂರು: ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ನೀಡಿರುವ ರಾಜ್ಯಪಾಲರ ನಿರ್ಧಾರ ಖಂಡಿಸಿ ಕಾಂಗ್ರೆಸ್‌ ರಾಜಭವನ ಚಲೋ ನಡೆಸಿತು.

Advertisement

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ನಾಯಕರಾದ ಗುಲಾಂ ನಬಿ ಆಝಾದ್‌,ಅಶೋಕ್‌ ಗೆಹೊÉàಟ್‌ ಸೇರಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಕೆಪಿಸಿಸಿ ಕಚೇರಿಯಿಂದ ಇಂಡಿಯನ್‌ ಎಕ್ಸ್‌ಪ್ರೆಸ್‌ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ರಾಜಭವನ ಮುತ್ತಿಗೆ ಹಾಕಲು ತೆರಳುತ್ತಿದ್ದ ಕಾಂಗ್ರೆಸ್‌ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ತಡೆದು,
ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಸೇರಿ ಕೆಲವು ನಾಯಕರು ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು.

ನಂತರ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಗುಲಾಂನಬಿ ಆಝಾದ್‌ ಹಾಗೂ ಮಾಜಿ ಸಿಎಂ
ಸಿದ್ದರಾಮಯ್ಯ, ಯಡಿಯೂರಪ್ಪಗೆ ವಿಶ್ವಾಸ ಮತ ಯಾಚಿಸಲು ಸುಪ್ರೀಂಕೋರ್ಟ್‌ ಒಂದು ದಿನದ ಕಾಲಾವಕಾಶ
ನೀಡಿರುವುದನ್ನು ಸ್ವಾಗತಿಸಿದರು.

ಯಡಿಯೂರಪ್ಪ ಬಹುಮತ ಸಾಬೀತು ಪಡಿಸಲು ಏಳು ದಿನ ಕಾಲಾವಕಾಶ ಕೇಳಿದರೆ,ರಾಜ್ಯಪಾಲರು ಹದಿನೈದು ದಿನ ಅವಕಾಶ ನೀಡಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದರು. ಕೇಂದ್ರ ಸರ್ಕಾರದ ಅಣತಿಯಂತೆ ನಡೆದುಕೊಂಡಿದ್ದರು. ಆದರೆ, ಸುಪ್ರೀಂಕೋರ್ಟ್‌ ನ ಮೂವರು ನ್ಯಾಯಮೂರ್ತಿಗಳು ಐತಿಹಾಸಿಕ ತೀರ್ಪು ನೀಡಿ ಪ್ರಜಾಪ್ರಭುತ್ವದ ರಕ್ಷಣೆ
ಮಾಡಿದ್ದಾರೆಂದು ಹೇಳಿದರು.

Advertisement

ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಸುಪ್ರೀಂಕೋರ್ಟ್‌ ನೀಡಿರುವ ತೀರ್ಪು ದೇಶದ ಇತಿಹಾಸದಲ್ಲಿಯೇ ಮಹತ್ವದ ಮೈಲಿಗಲ್ಲಾಗಿದೆ. ನ್ಯಾಯಮೂರ್ತಿಗಳು ಸಂವಿಧಾನ ರಕ್ಷಣೆಯ ಜವಾಬ್ದಾರಿ ನಿರ್ವಹಿಸಿದ್ದಾರೆ. ರಾಜ್ಯಪಾಲರು ಯಾವುದೇ ಪಕ್ಷದ ರಕ್ಷಣೆ ಮಾಡಬಾರದು.

ಹಿಂದಿನ ಸುಪ್ರೀಂಕೋರ್ಟ್‌ ತೀರ್ಪುಗಳನ್ನು ನೋಡಿ ರಾಜ್ಯಪಾಲರು ತೀರ್ಮಾನ ತೆಗೆದುಕೊಳ್ಳಬೇಕಿತ್ತು. ಆದರೆ, ಅವರು ಮೋದಿ ಮತ್ತು ಅಮಿತ್‌ ಶಾ ಅವರ ಅಣತಿಯಂತೆ ನಡೆದುಕೊಂಡಿದ್ದಾರೆಂದು ದೂರಿದರು.

ಅಮಿತ್‌ ಶಾ ಮತ್ತು ನರೇಂದ್ರ ಮೋದಿ ಹಿಟ್ಲರ್‌ನ ಪಳೆಯುಳಿಕೆ ಇದ್ದಂತೆ. ಆನೆ ನಡೆದದ್ದೇ ದಾರಿ ಎಂದು
ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಆಪರೇಶನ್‌ ಕಮಲದ ದಾಖಲೆ ಬಿಡುಗಡೆ
ಕಾಂಗ್ರೆಸ್‌ ಶಾಸಕರನ್ನು ಸೆಳೆಯಲು ಬಿಜೆಪಿಯ ಜನಾರ್ದನ ರೆಡ್ಡಿ, ಬಿ. ಶ್ರೀರಾಮುಲು ಕಾಂಗ್ರೆಸ್‌ ಶಾಸಕರಿಗೆ ದೂರವಾಣಿ ಕರೆ ಮಾಡಿ ಆಮಿಷಒಡ್ಡಿರುವ ದಾಖಲೆ ತಮ್ಮ ಬಳಿ ಇದೆ ಎಂದು  ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಜಯನಗರ (ಹೊಸಪೇಟೆ) ಶಾಸಕ ಆನಂದ್‌ ಸಿಂಗ್‌ ಅವರನ್ನು ಐಟಿ ದಾಳಿ ಮಾಡುವ ಬೆದರಿಕೆ ಒಡ್ಡಿ ಕೇಂದ್ರ ಸರ್ಕಾರ ಅವರನ್ನು ಕೂಡಿ ಹಾಕಿದೆ.ಕುದುರೆ ವ್ಯಾಪಾರ ಯಾರು ಮಾಡುತ್ತಿದ್ದಾರೆಂದು ಎಲ್ಲರಿಗೂ ಗೊತ್ತಾಗಿದೆ. ನಮ್ಮ ಬಳಿ 78 ಕಾಂಗ್ರೆಸ್‌ ಶಾಸಕರು, ಇಬ್ಬರು ಪಕ್ಷೇತರ ಶಾಸಕರು ಹಾಗೂ ಜೆಡಿಎಸ್‌ನ 38 ಶಾಸಕರು ಎಲ್ಲರೂ ಒಟ್ಟಾಗಿದ್ದೇವೆ. ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಎಲ್ಲ ರಾಜ್ಯಗಳಲ್ಲಿಯೂ ಅದೇ ತಂತ್ರ ಅನುಸರಿಸಿದ್ದಾರೆ.ಆದರೆ, ಅವರ ಆಟ ರಾಜ್ಯದಲ್ಲಿ ನಡೆಯುವುದಿಲ್ಲ ಎಂದು ತಿಳಿಸಿದರು

ಸುಪ್ರೀಂಕೋರ್ಟ್‌ ನಮ್ಮ ವಾದವನ್ನು ಎತ್ತಿ ಹಿಡಿದಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಸಂವಿಧಾನ ಬಾಹಿರವಾಗಿ
ನಡೆದುಕೊಂಡಿದ್ದಾರೆ ಎನ್ನುವುದನ್ನು ಸೂಚಿಸಿದೆ. ಬಿಜೆಪಿ ಸಂಖ್ಯಾಬಲ ಇಲ್ಲದಿದ್ದರೂ ಹಣ , ತೋಳ್ಬ ಲದ ಮೂಲಕ ಬಹುಮತ ಕದ್ದು ಸರ್ಕಾರ ರಚಿಸುವುದಾಗಿ ಹೇಳುತ್ತಿದೆ.

– ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ

Advertisement

Udayavani is now on Telegram. Click here to join our channel and stay updated with the latest news.

Next