Advertisement

ಕನ್ನಡ ಭಾಷೆ ಬೆಳವಣಿಗೆಗೆ ರಾಜ್‌ ಕೊಡುಗೆ ಅಪಾರ : ಲೋಕೇಶ್‌

11:52 PM Apr 25, 2019 | sudhir |

ಮಡಿಕೇರಿ :ರಾಜ್ಯದಲ್ಲಿ ಕನ್ನಡ ವಾತಾವರಣ ನಿರ್ಮಾಣವಾಗು ವಂತಾಗಲು ಗೋಕಾಕ್‌ ಚಳುವಳಿ ಪ್ರಮುಖವಾಗಿದ್ದು, ಕನ್ನಡ ಭಾಷೆ ಬೆಳವಣಿಗೆಗೆ ಡಾ.ರಾಜ್‌ಕುಮಾರ್‌ ಅವರ ಕೊಡುಗೆ ಅಪಾರ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷ ಲೋಕೇಶ್‌ ಸಾಗರ್‌ ಶ್ಲಾ ಸಿದ್ದಾರೆ.

Advertisement

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಬುಧವಾರ ನಡೆದ ಡಾ.ರಾಜ್‌ಕುಮಾರ್‌ ಅವರ 91 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಗೋಕಾಕ್‌ ಚಳುವಳಿಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಗೋಕಾಕ್‌ ವರದಿ ಅನುಷ್ಠಾನಕ್ಕೆ ಡಾ.ರಾಜ್‌ ಕುಮಾರ್‌ ಅವರು ಶ್ರಮಿಸಿದ್ದರು ಎಂದು ಲೋಕೇಶ್‌ ಸಾಗರ್‌ ಅವರು ಸ್ಮರಿಸಿದರು.

ಜಿ.ಪಂ.ಉಪಕಾರ್ಯದರ್ಶಿ ಗುಡೂರು ಭೀಮಸೇನ ಅವರು ಮಾತನಾಡಿ ಡಾ.ರಾಜ್‌ಕುಮಾರ್‌ ಅಭಿನಯದ ಸತ್ಯಹರಿಶ್ಚಂದ್ರ, ಕವಿರತ್ನ ಕಾಳಿದಾಸ ಮತ್ತಿತರ ಚಿತ್ರಗಳು ಇಂದಿಗೂ ಜನಮೆಚ್ಚುಗೆಗೆ ಪಾತ್ರವಾಗಿವೆ. ಇವರ ಕನ್ನಡ ಅಭಿಮಾನ, ಭಾಷೆ ಬೆಳವಣಿಗೆಗೆ ಕೊಡುಗೆ ಅಪಾರ ಎಂದು ಅವರು ಹೇಳಿದರು.

ಡಾ.ರಾಜ್‌ಕುಮಾರ್‌ ಅವರಿಗೆ ಕರ್ನಾಟಕ ರತ್ನ, ಪದ್ಮಭೂಷಣ, ದಾದಾ ಸಾಹೇಬ್‌ ಪಾಲ್ಕೆ, ಹೀಗೆ ಹಲವು ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳು ಬಂದಿವೆ ಎಂದು ಅವರು ತಿಳಿಸಿದರು.

ಜಿ.ಪಂ.ಸಿಇಓ ಕೆ.ಲಕ್ಷಿ¾ಪ್ರಿಯಾ ಅವರು ಮಾತನಾಡಿ ಹೊರ ರಾಜ್ಯದಿಂದ ಬಂದವರಿಗೆ ಕನ್ನಡ ಭಾಷೆ ಕಲಿಯುವಂತಾಗಲು ಡಾ.ರಾಜ್‌ಕುಮಾರ್‌ ಅವರ ಸಿನಿಮಾಗಳು ಪ್ರೇರಣೆಯಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

Advertisement

ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಉಪ ಪೊಲೀಸ್‌ ವರಿಷ್ಠಾಧಿಕಾರಿ ಸುಂದರರಾಜ್‌, ಜಿ.ಪಂ.ಮುಖ್ಯ ಲೆಕ್ಕಾಧಿಕಾರಿ ನಂದ, ಜಿಲ್ಲಾ ಖಜಾನಾಧಿಕಾರಿ ಸತೀಶ್‌, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ.ಜಗನ್ನಾಥ್‌ ಇತರರು ಹಾಜರಿದ್ದರು.

ಕಾರ್ಯಕ್ರಮ ಆರಂಭದಲ್ಲಿ ಡಾ.ರಾಜ್‌ಕುಮಾರ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಲಾಯಿತು. ವಾರ್ತಾಧಿಕಾರಿ ಚಿನ್ನಸ್ವಾಮಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next