Advertisement

ಗೆಳತಿಯೊಂದಿಗೆ ಖಳನಟ ರಾಜ್ ದೀಪಕ್ ಶೆಟ್ಟಿ ನಿಶ್ಚಿತಾರ್ಥ

04:29 AM Jun 20, 2020 | Lakshmi GovindaRaj |

ಭರ್ಜರಿ, ಭರಾಟೆ, ಪಂಚತಂತ್ರ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದ ಖಳನಟ ರಾಜ್ ದೀಪಕ್ ಶೆಟ್ಟಿ ಎಂಗೇಜ್‌ಮೆಂಟ್ ನೆರವೇರಿದೆ. ಅವರು ತಮ್ಮ ಬಹುಕಾಲದ ಗೆಳತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಹೌದು! ದಕ್ಷಿಣ ಭಾರತದ ಹೆಸರಾಂತ ಖಳನಟ ರಾಜ್ ದೀಪಕ್ ಶೆಟ್ಟಿ ಇವೆಂಟ್‌ ಆರ್ಗನೈಸರ್ ಆಗಿರುವ ಮಂಗಳೂರಿನ ತಮ್ಮ ಗೆಳತಿ ಸೋನಿಯಾ ರಾಡ್ರಿಗಸ್ ಜೊತೆ ಎಂಗೇಜ್ ಆಗಿದ್ದಾರೆ.

Advertisement

ಅಲ್ಲದೇ ಇಬ್ಬರೂ ಬಹುಕಾಲದಿಂದ ಪ್ರೀತಿಸುತ್ತಿದ್ದರು. ಮಂಗಳೂರಿನಲ್ಲಿ ರಾಜ್ ದೀಪಕ್ ಶೆಟ್ಟಿ ಮತ್ತು ಸೋನಿಯಾ ರಾಡ್ರಿಗಸ್ ಇವರ ನಿಶ್ಚಿತಾರ್ಥ ಸಮಾರಂಭ ನೆರವೇರಿದೆ. ಕುಟುಂಬದವರು ಮತ್ತು ಆಪ್ತ ಸ್ನೇಹಿತರು ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ನವಜೋಡಿಗೆ ಶುಭ ಹಾರೈಸಿದ್ದಾರೆ. ಸೋನಿಯಾ ರಾಡ್ರಿಗಸ್ ಇವೆಂಟ್ ಆರ್ಗನೈಸರ್ ಆಗಿದ್ದು, ಮಂಗಳೂರು ಫ್ಯಾಷನ್ ವೀಕ್‍ನ ಮಾಲಕಿ ಕೂಡ ಆಗಿದ್ದಾರೆ.

ಇನ್ನು ಮೇ 17ರಂದು ಈ ಜೋಡಿಯ ಮದುವೆ ನಿಶ್ಚಯವಾಗಿತಾದರೂ ಇದೀಗ ಕೋವಿಡ್‌ 19 ಕಾರಣದಿಂದ ಮುಂದೂಡಿಕೆಯಾಗಿದೆ. ಸದ್ಯ ರಾಜ್ ದೀಪಕ್ ನಟನೆಯ ಕೋಟಿಗೊಬ್ಬ 3 ಚಿತ್ರ ಸೇರಿದಂತೆ ಬಹಳಷ್ಟು ಸಿನಿಮಾಗಳು ಬಿಡುಗಡೆಯಾಗಬೇಕಿದೆ. ಇದಲ್ಲದೆ ಹಲವಾರು ತೆಲುಗು ಚಿತ್ರಗಳಲ್ಲಿ ಸಹ ನಟಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next