ಸಾಂಗ್ಲಿ: 14 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ನವ್ ನಿರ್ಮಾಣ ಸೇನಾ(ಎಂಎನ್ ಎಸ್)ದ ವರಿಷ್ಠ ರಾಜ್ ಠಾಕ್ರೆ ವಿರುದ್ಧ ಮಹಾರಾಷ್ಟ್ರದ ಸಾಂಗ್ಲಿಯ ಕೋರ್ಟ್ ಜಾಮೀನು ರಹಿತ ವಾರಂಟ್ ಅನ್ನು ಬಿಡುಗಡೆಗೊಳಿಸಿದ್ದು, ಇದರಿಂದ ರಾಜ್ ಠಾಕ್ರೆ ಸಂಕಷ್ಟಕ್ಕೊಳಗಾಗುವಂತಾಗಿದೆ.
ಇದನ್ನೂ ಓದಿ:ಬಿಟ್ ಕಾಯಿನ್: ತನಿಖೆ ಚುರುಕಾದ್ರೆ ಸಿಎಂ ಬದಲಾವಣೆ; ಪ್ರಿಯಾಂಕ್ ಖರ್ಗೆ
2008ರಲ್ಲಿ ರಾಜ್ ಠಾಕ್ರೆ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ್ದ ಆರೋಪದಡಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 109 ಮತ್ತು 117ರ ಅಡಿ ಪ್ರಕರಣ ದಾಖಲಿಸಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಂಗ್ಲಿ ಜಿಲ್ಲೆಯ ಶಿರಾಲಾದ ಪ್ರಥಮ ದರ್ಜೆ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ರಾಜ್ ಠಾಕ್ರೆ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ್ದು, ಠಾಕ್ರೆಯನ್ನು ಬಂಧಿಸಿ, ಕೋರ್ಟ್ ಮುಂದೆ ಹಾಜರುಪಡಿಸಬೇಕೆಂದು ಮುಂಬಯಿ ಪೊಲೀಸರಿಗೆ ನಿರ್ದೇಶನ ನೀಡಿರುವುದಾಗಿ ವರದಿ ತಿಳಿಸಿದೆ.
ರಾಜ್ ಠಾಕ್ರೆ ಹಾಗೂ ಎಂಎನ್ ಎಸ್ ಮುಖಂಡ ಶಿರೀಶ್ ಪರಾಕರ್ ಸೇರಿದಂತೆ ಇಬ್ಬರ ವಿರುದ್ಧವೂ ಜಾಮೀನು ರಹಿತ ವಾರಂಟ್ ಹೊರಡಿಸಿ, ಕೋರ್ಟ್ ಮುಂದೆ ಹಾಜರುಪಡಿಸುವಂತೆ ಮುಂಬಯಿ ಪೊಲೀಸ್ ಕಮಿಷನರ್ ಮತ್ತು ಖೆರ್ವಾಡಿ ಪೊಲೀಸ್ ಠಾಣೆಗೆ ಕೋರ್ಟ್ ಸೂಚನೆ ನೀಡಿತ್ತು ಎಂದು ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಜ್ಯೋತಿ ಪಾಟೀಲ್ ತಿಳಿಸಿದ್ದಾರೆ.
ಮಸೀದಿಗಳಲ್ಲಿನ ಲೌಡ್ ಸ್ಪೀಕರ್ ಗಳನ್ನು ತೆರವುಗೊಳಿಸಲು ರಾಜ್ ಠಾಕ್ರೆ ಮಹಾರಾಷ್ಟ್ರ ಸರ್ಕಾರಕ್ಕೆ ಮೇ 3ರ ಅಂತಿಮ ಗಡುವು ವಿಧಿಸಿದ್ದರು. ಈ ಸಂದರ್ಭದಲ್ಲಿಯೇ ಸಾಂಗ್ಲಿ ಕೋರ್ಟ್ ರಾಜ್ ಠಾಕ್ರೆ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಿದ ಬೆಳವಣಿಗೆ ನಡೆದಿದೆ.