Advertisement

ರಾಜಧಾನಿಯಲ್ಲಿ ರಾಜವರ್ಧನ್‌

11:48 AM Jun 15, 2018 | Team Udayavani |

ಬೆಂಗಳೂರು: “ಬೆಂಬಲಕ್ಕಾಗಿ ಜನಸಂಪರ್ಕ’ ಅಭಿಯಾನದಡಿ ಕೇಂದ್ರ ವಾರ್ತಾ ಮತ್ತು ಪ್ರಸಾರ, ಕ್ರೀಡಾ ಹಾಗೂ ಯುವಜನ ಸೇವಾ ಸಚಿವ ರಾಜವರ್ಧನ್‌ ಸಿಂಗ್‌ ರಾಥೋಡ್‌ ಗುರುವಾರ ನಗರದ ವಿವಿಧ ಗಣ್ಯರನ್ನು ಭೇಟಿ ಮಾಡಿ, ಸರ್ಕಾರದ ಸಾಧನೆಗಳ ಕುರಿತು ಚರ್ಚಿಸಿದರು. 

Advertisement

ಖ್ಯಾತ ಕ್ರಿಕೆಟಿಗ ಅನಿಲ್‌ ಕುಂಬ್ಳೆ, ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜೂಂದಾರ್‌ ಷಾ, ಐಐಎಂಬಿ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳನ್ನು ಭೇಟಿ ಮಾಡಿದ ರಾಜವರ್ಧನ್‌ ಸಿಂಗ್‌ ರಾಥೋಡ್‌, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಾದ ಸರ್ಕಾರದ ಸಾಧನೆಗಳ ವಿವರಗಳನ್ನು ಒಳಗೊಂಡ ಪುಸ್ತಕವನ್ನು ನೀಡಿದರು.

ನಂತರ ಕೆಲಹೊತ್ತು ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಸಲಹೆಗಳನ್ನು ಕೂಡ ಪಡೆದರು. ಅಷ್ಟೇ ಅಲ್ಲ, ಐಐಎಂಬಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದ ಕೇಂದ್ರ ಸಚಿವರು, ಬಾಸ್ಕೆಟ್‌ ಬಾಲ್‌ ಆಟವಾಡಿ, ವಿದ್ಯಾರ್ಥಿಗಳ ಮನಗೆದ್ದರು. ಇದೇ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ-ಅಫ್ಘಾನಿಸ್ತಾನ ನಡುವಿನ ಮೊದಲ ಟೆಸ್ಟ್‌ ಪಂದ್ಯ ಆರಂಭಕ್ಕೂ ಮುನ್ನ ಪ್ರಧಾನಿ ಸಂದೇಶ ಓದುವ ಮೂಲಕ ಉಭಯ ತಂಡಗಳಿಗೆ ಶುಭ ಹಾರೈಸಿದರು.

ಕೇಂದ್ರ ಸರ್ಕಾರ ನಾಲ್ಕು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ “ಬೆಂಬಲಕ್ಕಾಗಿ ಜನಸಂಪರ್ಕ’ ಅಭಿಯಾನ ಹಮ್ಮಿಕೊಂಡಿದ್ದು, ಇದರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಆಡಳಿತದ ಮತ್ತು ನಾಲ್ಕು ವರ್ಷದ ಸಾಧನೆಯ ವಿವರಗಳನ್ನು ಒಳಗೊಂಡ ಪುಸ್ತಕಗಳನ್ನು ಗಣ್ಯರಿಗೆ ನೀಡಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next