ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಮಹಿಪಾಲರೆಡ್ಡಿ ಸೇಡಂ ಹೇಳಿದರು.
Advertisement
ತಾಲೂಕಿನ ಬಳಿಚಕ್ರ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ವರಕವಿ ಬೇಂದ್ರೆ ಸಾಹಿತ್ಯ ಸಂಘದಿಂದ ಆಯೋಜಿಸಿದ್ದ “ಓದುವ ಮೂಲೆ ಸಾಹಿತ್ಯ ಪ್ರಭಾ’ ಉದ್ಘಾಟನೆ ಮತ್ತು ನುಡಿ ನಿತ್ಯೋತ್ಸವ-01 ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿಶೇಷ ಉಪನ್ಯಾಸ ನೀಡಿದ ಅವರು, ಕನ್ನಡ ಭಾಷೆ ಎರಡು ಸಾವಿರ ವರ್ಷಗಳ ಹಳೆಯದು. ಸಂಸ್ಕೃತ, ತಮಿಳು ನಂತರ ಮೂರನೇ ಸ್ಥಾನದಲ್ಲಿರುವ ಭಾರತೀಯ ಭಾಷೆ ಎಂಬುದು ನಮ್ಮ ಹೆಮ್ಮೆ ಎಂದರು.
Related Articles
ಕೋಣೆಯೊಂದರಲ್ಲಿ ಪುಸ್ತಕಗಳು, ಸ್ಪರ್ಧಾತ್ಮಕ ಪತ್ರಿಕೆಗಳನ್ನು ಜೋಡಿಸಿಟ್ಟು, ಮೂಲೆಯೊಂದರಲ್ಲಿ ಅದರ ಮಾಹಿತಿಯೊಂದಿಗೆ ಪುಸ್ತಕವನ್ನು ಓದುವ ಹವ್ಯಾಸ ಬೆಳೆಸುವುದಕ್ಕಾಗಿ “ಓದುವ ಮೂಲೆ’ (ರೀಡಿಂಗ್ ಕಾರ್ನರ್) ರೂಪಿಸಲಾಗಿದೆ. ಬಳಿಚಕ್ರ ಸರಕಾರಿ ಪ್ರೌಢಶಾಲೆಯಲ್ಲಿ ಇಂತಹದೊಂದು ಹೊಸ ಪರಿಕಲ್ಪನೆ ಮಾಡಿದ್ದು ಅಲ್ಲಿಯ ಮುಖ್ಯಗುರು ಅನ್ನಪೂರ್ಣ ಭಂಡಾರಕರ್ ಅವರು, ಪುಸ್ತಕಗಳನ್ನು ಓದುವ, ಮಸ್ತಕವನ್ನು ಬೆಳೆಸಿಕೊಳ್ಳುವ ಈ ಹೊಸ ಆಲೋಚನೆಗೆ ಕ್ಷೇತ್ರ ಸಮನ್ವಯಾಧಿಕಾರಿ ಮಲ್ಲಿಕಾರ್ಜುನ ಪೂಜಾರಿ ಮೆಚ್ಚುಗೆ ವ್ಯಕ್ತಪಡಿಸಿದರು.
Advertisement