ಹೊಸದಿಲ್ಲಿ: ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ಭಾರತ-ಚೀನಾ ಗಡಿ ಸಂಘರ್ಷದ ಕುರಿತು ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸದನದಲ್ಲಿ ಮಾತನಾಡಲಿದ್ದಾರೆ.
ಮಧ್ಯಾಹ್ನ ಮೂರು ಗಂಟೆಯ ಸುಮಾರಿಗೆ ಲೋಕಸಭೆಯಲ್ಲಿ ರಕ್ಷಣಾ ಸಚಿವರು ಗಡಿ ಭಾಗದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಸದನಕ್ಕೆ ಮಾಹಿತಿ ನೀಡಲಿದ್ದಾರೆ.
ಈ ವಿಷಯದ ಕುರಿತು ಸದನದಲ್ಲಿ ಚರ್ಚೆ ನಡೆಯಬೇಕೆಂದು ವಿಪಕ್ಷ ನಾಯಕರಿಂದ ಒತ್ತಾಯ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಮಾಹಿತಿ ಹಂಚಿಕೊಳ್ಳಲಿದ್ದಾರೆ.
ಇದನ್ನೂ ಓದಿ: ಮೂವಿ ಮಾಫಿಯಾಗೆ ಆದಿತ್ಯ ನಂಟು!: ಉದ್ಧವ್ ಪುತ್ರನ ವಿರುದ್ಧ ಬಾಲಿವುಡ್ ನಟಿ ಕಂಗನಾ ಆರೋಪ
ಜೂನ್ 15 ರಂದು ಗಾಲ್ವಾನ್ ಕಣಿವೆ ಘರ್ಷಣೆಯ ನಂತರ ಪೂರ್ವ ಲಡಾಖ್‌ನ ಎಲ್‌ಎಸಿ ಉದ್ದಕ್ಕೂ ಭಾರತ ಮತ್ತು ಚೀನಾ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಗಾಲ್ವಾನ್ ಕಣಿವೆ ಸಂಘರ್ಷದಲ್ಲಿ 20 ಭಾರತೀಯ ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಚೀನಾ ಪಡೆಯಲ್ಲೂ ಹಲವಾರು ಸಾವು ನೋವುಗಳಾಗಿದ್ದು, ಆದರೆ ಯಾವುದೇ ನಿಖರ ಮಾಹಿತಿಯನ್ನು ಚೀನಾ ಇದುವರೆಗೆ ಬಹಿರಂಗಪಡಿಸಿಲ್ಲ.