Advertisement

ರಜನಿ ಹೊಸ ಚಿತ್ರದ ಟೀಸರ್‌ಗೆ ಒಂದು ಕೋಟಿ ಪ್ಲಸ್ ಹಿಟ್ಸ್: Watch

12:58 PM Sep 15, 2018 | Team Udayavani |

ಸೂಪರ್ ಸ್ಟಾರ್ ರಜನಿಕಾಂತ್, ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಬಹುಕೋಟಿ ವೆಚ್ಚದ ಬಹು ನಿರೀಕ್ಷಿತ ಚಿತ್ರ “2.0′ ಟೀಸರ್ ಬಿಡುಗಡೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಕತ್ ಹವಾ ಕ್ರಿಯೇಟ್ ಮಾಡಿದೆ. ಈ ಹಿಂದೆ ಎಂದಿರನ್(ರೋಬೊಟ್) ಚಿತ್ರ ನಿರ್ದೇಶಿಸಿ ಹಾಲಿವುಡ್ ಮಟ್ಟದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಶಂಕರ್ ಅವರೇ ಚಿತ್ರದ ಮುಂದುವರೆದ ಭಾಗವನ್ನು ನಿರ್ದೇಶಿಸಿದ್ದಾರೆ.

Advertisement

ಹೀಗಾಗಿ ಸಿನಿಪ್ರಿಯರಲ್ಲಿ ಈ ಚಿತ್ರ ಮತ್ತಷ್ಟು ಕುತೂಹಲ ಮೂಡಿಸಿದೆ. ಅಲ್ಲದೇ ಕೆಲವು ತಿಂಗಳ ಹಿಂದೆ ರಜನಿಕಾಂತ್ ಮತ್ತು ಅಕ್ಷಯ್ ಕುಮಾರ್ ಇಬ್ಬರೂ ಸಿನಿಮಾಗಾಗಿ ರೆಡಿಯಾಗುವ ಮೇಕಿಂಗ್ ವೀಡಿಯೋ ಬಿಡುಗಡೆ ಮಾಡಲಾಗಿತ್ತು. ಈ ಮೇಕಿಂಗ್ ವೀಡಿಯೋದಲ್ಲಿ ಎಲ್ಲ ತಂತ್ರಜ್ಞರು, ನಟರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದರು. ಇದೀಗ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದ್ದು, ಚಿತ್ರದ ಟೀಸರ್ ತುಂಬಾ ಇಂಟರೆಸ್ಟಿಂಗ್ ಆಗಿದೆ. 

ಇದುವರೆಗೂ 1 ಕೋಟಿಗೂ ಹೆಚ್ಚು ಸಿನಿಪ್ರಿಯರು ವೀಕ್ಷಿಸಿದ್ದಾರೆ. ಬಾಲಿವುಡ್ ನಟ ಅಕ್ಷಯ್​ ಕುಮಾರ್​ ಈ ಚಿತ್ರದಲ್ಲಿ ನೆಗೆಟಿವ್ ಪಾತ್ರದಲ್ಲಿ ಅಭಿನಯಿಸಿದ್ದು, ವಿಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಂಡಿರುವುದು ಮತ್ತಷ್ಟು ಥ್ರಿಲ್ ಮೂಡಿಸಿದೆ. ರೋಬೋಟ್​ ಪಾತ್ರದಲ್ಲಿ ನಾಯಕ ರಜನಿಕಾಂತ್ ಮಿಂಚಿದ್ದು, ಎಂದಿನಂತೆ ಈ ಚಿತ್ರದಲ್ಲೂ ತಮ್ಮ ಸ್ಟೈಲ್​​​​ ತೋರಿಸಲಿದ್ದಾರೆ.

ಇನ್ನು ಚಿತ್ರವು ಸುಮಾರು 15 ಭಾಷೆಗಳಿಗೆ ಡಬ್ ಆಗಲಿದ್ದು, 3ಡಿ ರೂಪದಲ್ಲಿಯೂ ಸಹ ಸಿದ್ದಗೊಂಡಿದೆ. ಲೈಕಾ ಪ್ರೊಡಕ್ಷನ್ಸ್ನಲ್ಲಿ ಕರಣ್ ಜೋವರ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ 543 ಕೋಟಿ ಬಂಡವಾಳ ಹೂಡಿರುವುದು ಭಾರತೀಯ ಚಿತ್ರರಂಗದ ಹೊಸ ದಾಖಲೆಯಾಗಿದೆ. ಚಿತ್ರದ ನಾಯಕಿಯಾಗಿ ಕನ್ನಡದ ವಿಲನ್ ಖ್ಯಾತಿಯ ಆ್ಯಮಿ ಜಾಕ್ಸನ್ ನಟಿಸಿದ್ದು, ಎ.ಆರ್.ರೆಹಮಾನ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ.

Advertisement

Udayavani is now on Telegram. Click here to join our channel and stay updated with the latest news.

Next