ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮರಿಮೊಮ್ಮಗ ರಾಜರತ್ನ ಅಂಬೇಡ್ಕರ್ ಅವರು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿದರು.
ವಿಧಾನಸೌಧದ ಉಪಮುಖ್ಯಮಂತ್ರಿಯವರ ಕಚೇರಿಯಲ್ಲಿ ಸೋಮವಾರ ಪರಮೇಶ್ವರ್ ಅವರನ್ನು ಭೇಟಿ ಮಾಡಿದ ರಾಜರತ್ನ ಅಂಬೇಡ್ಕರ್, ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸಿದರು.
ಸಂವಿಧಾನ ಬದಲಿಸುವ ಹೇಳಿಕೆಗಳನ್ನು ವಿರೋಧಿಸಿ ದೇಶ ವ್ಯಾಪಿ ಹೋರಾಟಕ್ಕೆ ಮುಂದಾಗಿರುವ ರಾಜರತ್ನ ಅಂಬೇಡ್ಕರ್ ಅದರ ಭಾಗವಾಗಿ ಬೆಂಗಳೂರಿಗೆ ಭೇಟಿ ಕೊಟ್ಟು ಉಪಮುಖ್ಯಮಂತ್ರಿ ಜತೆ ಚರ್ಚಿಸಿದರು ಎನ್ನಲಾಗಿದೆ.
ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜರತ್ನ ಅಂಬೇಡ್ಕರ್,ಮೊದಲ ಬಾರಿಗೆ ಪರಮೇಶ್ವರ್ ಅವರನ್ನು ಭೇಟಿ ಮಾಡಿದ್ದೇನೆ. ಈ ಭೇಟಿ ಸಂತಸ ತಂದಿದೆ. ಸಂವಿಧಾನ ಬದಲಿಸುವ ಹೇಳಿಕೆಗಳ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿದರು ಎಂದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಉಪಸ್ಥಿತರಿದ್ದರು.