Advertisement

ರಾಜಶೇಖರ ಪಾಟೀಲ್‌ ಹೈ.ಕ.ಅಭಿವೃದ್ಧಿ ಮಂಡಳಿ ಅಧ್ಯಕ್ಷ

06:40 AM Sep 28, 2018 | Team Udayavani |

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಹಾಗೂ ಮುಜರಾಯಿ ಸಚಿವ ರಾಜಶೇಖರ್‌ ಪಾಟೀಲ್‌ ಅವರನ್ನು ಹೈದರಾಬಾದ್‌
ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷರನ್ನಾಗಿ ಸರ್ಕಾರ ನೇಮಿಸಿದೆ.

Advertisement

2018ರ ಮಾರ್ಚ್‌ನಲ್ಲಿ ಕಾಂಗ್ರೆಸ್‌ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದ ಬಸವರಾಜ್‌ ರಾಯರಡ್ಡಿ ಅವರನ್ನು ಹೈ.ಕ.ಅಭಿವೃದ್ಧಿ ಮಂಡಳಿಗೆ 2 ವರ್ಷಗಳಿಗೆ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿತ್ತು. ನಂತರ ಮೇ ತಿಂಗಳಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದರಿಂದ ಅವರ ಅವಧಿ ಅಂತ್ಯಗೊಂಡಿದ್ದು, ಹೊಸ ಸರ್ಕಾರ ರಾಜಶೇಖರ್‌ ಪಾಟೀಲ್‌ ಅವರನ್ನು ಎರಡು ವರ್ಷಗಳ ಅವಧಿಗೆ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next