ರಾಜಸ್ಥಾನ: ರಾಜಸ್ಥಾನದಲ್ಲಿ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು 19 ವರ್ಷದ ಯುವತಿಯನ್ನು ಮನೆಯಿಂದ ಅಪಹರಿಸಿ, ಆಸಿಡ್ ದಾಳಿ ನಡೆಸಿ ಬಳಿಕ ಗುಂಡು ಹಾರಿಸಿ ಆಕೆಯ ಶವವನ್ನು ಬಾವಿಯಲ್ಲಿ ಎಸೆದಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ.
ಪೊಲೀಸರ ಮಾಹಿತಿ ಪ್ರಕಾರ 19 ವರ್ಷದ ಯುವತಿಯನ್ನು ಅಪಹರಿಸಿ ಆಸಿಡ್ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದರು. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಬಿಎಸ್ಪಿ ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಟೀಕೆ ವ್ಯಕ್ತವಾಗಿದೆ. ಸಂಸದ ಕಿರೋಡಿ ಲಾಲ್ ಮೀನಾ ಮತ್ತು ಪ್ರತಿಪಕ್ಷ ಬಿಜೆಪಿ ನಾಯಕರು ಸಂತ್ರಸ್ತ ಕುಟುಂಬಕ್ಕೆ ಬೆಂಬಲ ನೀಡಿದ್ದು. ಮೃತದೇಹವನ್ನು ಆಸ್ಪತ್ರೆಯ ಹೊರಭಾಗದಲ್ಲಿಟ್ಟು ಮರಣೋತ್ತರ ಪರೀಕ್ಷೆ ನಡೆಸುವಂತೆ ಪ್ರತಿಭಟನೆ ನಡೆಸಿದರು. ಯುವತಿಯ ಅಪಹರಣದ ಕುರಿತಾಗಿ ಶುಕ್ರವಾರ ರಾಜಸ್ಥಾನ ವಿಧಾನಸಭೆಯಲ್ಲಿ ವಿರೋಧ ಪಕ್ಷದ ಶಾಸಕರು ಈ ವಿಷಯ ಪ್ರಸ್ತಾಪಿಸಿ, ಘಟನೆಯ ಬಗ್ಗೆ ಸರ್ಕಾರದ ಪ್ರತಿಕ್ರಿಯೆಗೆ ಒತ್ತಾಯಿಸಿದರು.
19 ವರ್ಷದ ಯುವತಿಯನ್ನು ಜುಲೈ 12 ರಂದು ನಾಲ್ವರು ದುಷ್ಕರ್ಮಿಗಳು ಆಕೆಯ ಮನೆಯಿಂದ ಅಪಹರಿಸಿದ್ದರು ಇದೀಗ ಆಕೆಯ ಮೃತದೇಹ ಬಾವಿಯಲ್ಲಿ ಗುಂಡು ಹಾರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಇದನ್ನೂ ಓದಿ: The Trial: 23 ವರ್ಷಗಳ ನಂತರ ಕಾಜೋಲ್ ಲಿಪ್ ಲಾಕ್ ಸೀನ್: ವಿಡಿಯೋ ವೈರಲ್