ಜೈಪುರ: ರಾಜಸ್ಥಾನದ ನ್ಯಾಯಾಧೀಶರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅತ್ಯಾಚಾರ ಪ್ರಕರಣದ ಸಂತ್ರಸ್ತೆಗೆ ತನ್ನ ಗಾಯಗಳನ್ನು ತೋರಿಸಲು ಬಟ್ಟೆ ಬಿಚ್ಚಲು ಹೇಳಿದ ಕಾರಣಕ್ಕೆ ನ್ಯಾಯಾಧೀಶರ ವಿರುದ್ಧ ದೂರು ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.
ಮಾರ್ಚ್ 30 ರಂದು ಈ ಘಟನೆ ನಡೆದಿದ್ದು, ಸಂತ್ರಸ್ಥೆಯು ಪ್ರಕರಣವೊಂದರಲ್ಲಿ ತನ್ನ ಹೇಳಿಕೆಯನ್ನು ದಾಖಲಿಸಲು ಹೋಗಿದ್ದರು ಎಂದು ಎಫ್‌ಐಆರ್ ತಿಳಿಸಿದೆ.
ಆರೋಪಿ ಹಿಂಡೌನ್ ಸಿಟಿ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 345 ಅಡಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ (ಎಸ್‌ಸಿ/ಎಸ್‌ಟಿ) ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಎಫ್‌ಐಆರ್ ಪ್ರಕಾರ, ಸಂತ್ರಸ್ಥೆ ಮಹಿಳೆ ಹೇಳಿಕೆ ನೀಡಿದ ನಂತರ ಆಕೆಯ ಗಾಯಗಳನ್ನು ನೋಡಲು ಆರೋಪಿಯು ತನ್ನ ಬಟ್ಟೆಗಳನ್ನು ತೆಗೆಯುವಂತೆ ಕೇಳಿದ್ದಾರೆ ಎಂದು ಆರೋಪಿಸಿದ್ದಾರೆ.
ಸಂತ್ರಸ್ತೆ ಆಕ್ಷೇಪಿಸಿದ್ದು, ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ತನ್ನ ಬಟ್ಟೆಗಳನ್ನು ತೆಗೆಯಲು ಆಗುತ್ತಿರಲಿಲ್ಲ. ಮಹಿಳಾ ನ್ಯಾಯಾಧೀಶರು ಇದ್ದಿದ್ದರೆ ಮಾಡುತ್ತಿದ್ದೆ ಎಂದು ಅವರು ಹೇಳಿದರು.