ಜೈಪುರ: ಉದಯ್‌ಪುರ ಶಿರಚ್ಛೇದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜಸ್ಥಾನದ ಭೀಮ್, ರಾಜ್‌ಸಮಂದ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆದಿದ್ದು, ಭಾರಿ ಕಲ್ಲು ತೂರಾಟ ನಡೆಸಲಾಗಿದ್ದು, ಪೊಲೀಸರು ಗಾಯಗೊಂಡಿದ್ದು, ಹಲವರನ್ನು ಬಂಧಿಸಲಾಗಿದೆ.
ಪ್ರತಿಭಟನಾಕಾರರನ್ನು ಸೂಕ್ಷ್ಮ ಪ್ರದೇಶಗಳಿಗೆ ತೆರಳದಂತೆ ತಡೆಯಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಲಾಠಿ ಚಾರ್ಜ್ ಮಾಡಿದ್ದಾರೆ. ಈ ವೇಳೆ ಭಾರಿ ಕಲ್ಲು ತೂರಾಟ ನಡೆದಿದೆ. ಹರಿತವಾದ ವಸ್ತುವಿನಿಂದ ದಾಳಿ ಮಾಡಿದ ನಂತರ ಒಬ್ಬ ಕಾನ್‌ಸ್ಟೆಬಲ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉದಯಪುರದಲ್ಲಿ ಟೈಲರ್ ಕನ್ಹಯ್ಯಲಾಲ್ ಅವರ ಶಿರಚ್ಛೇದ ಮಾಡಿದ ಇಬ್ಬರು ಆರೋಪಿಗಳನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಬಂಧಿಸಿದ್ದು, ರಾಜ್ಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.