Advertisement

ರಾಜಸ್ಥಾನ : 50 ಲಕ್ಷ ಉದ್ಯೋಗ ಸೃಷ್ಟಿಸುವ ಭರವಸೆ; ಬಿಜೆಪಿ ಪ್ರಣಾಳಿಕೆ

12:31 PM Nov 27, 2018 | Team Udayavani |

ಹೊಸದಿಲ್ಲಿ : ಮುಂದಿನ ಐದು ವರ್ಷಗಳಲ್ಲಿ ರಾಜಸ್ಥಾನದಲ್ಲಿ ಪ್ರತೀ ವರ್ಷ 30,000 ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದು ಮುಖ್ಯಮಂತ್ರಿ ವಸುಂಧರಾ ರಾಜೆ ಹೇಳಿದ್ದಾರೆ. 

Advertisement

ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿನ ಖಾಸಗಿ ರಂಗದಲ್ಲಿ 50 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದು ರಾಜೇ ಅವರು ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಹೇಳಿದರು. ಚುನಾವಣಾ ಪ್ರಣಾಳಿಕೆ ಬಿಡುಗಡೆ ಸಂದರ್ಭದಲ್ಲಿ  ಕೇಂದ್ರ ಹಣಕಾಸು ಸಚಿವ ಅರುಣ್‌ ಜೇತ್ಲಿ ಉಪಸ್ಥಿತರಿದ್ದರು. 

ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿರುವ ರಾಜಸ್ಥಾನದಲ್ಲಿ ಡಿಸೆಂಬರ್‌ 7ರಂದು ಮತದಾನ ನಡೆಯಲಿದ್ದು ಡಿ.11ರಂದು ಮತ ಎಣಿಕೆ ನಡೆದು ಫ‌ಲಿತಾಂಶ ಪ್ರಕಟಗೊಳ್ಳಲಿದೆ. 

ಪ್ರತೀ ಬಾರಿ ಆಳುವ ಪಕ್ಷವನ್ನು ಬದಲಾಯಿಸಿ ವಿರೋಧ ಪಕ್ಷವನ್ನು ಅಧಿಕಾರಕ್ಕೇರಿಸುವ ಸಂಪ್ರದಾಯವಿರುವ ರಾಜಸ್ಥಾನದಲ್ಲಿ ಈ ಬಾರಿ ಆಳುವ ಬಿಜೆಪಿ ಪತನಗೊಂಡು ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದೆಂದು ಸಮೀಕ್ಷೆಗಳು ಅಂದಾಜಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next