Advertisement
ಗುರುವಾರ ಗೆಹ್ಲೋಟ್ ಅವರು ದೆಹಲಿಗೆ ಆಗಮಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿ ವಾಪಸಾಗಿದ್ದಾರೆ. ಈ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಅಲ್ಲದೇ, ಇತ್ತೀಚೆಗೆ ಜೈಪುರದಲ್ಲಿ ನಡೆದ ಘಟನೆಗಳಿಗಾಗಿ ನಾನು ಸೋನಿಯಾರಲ್ಲಿ ಕ್ಷಮೆ ಯಾಚಿಸಿದ್ದೇನೆ ಎಂದೂ ತಿಳಿಸಿದ್ದಾರೆ.
Related Articles
Advertisement
ಎಐಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾದ ದಿಗ್ವಿಜಯ್ ಸಿಂಗ್ ಹಾಗೂ ಶಶಿತರೂರ್ ಅವರು ಗುರುವಾರ ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಉಭಯ ನಾಯಕರು, “ನಮ್ಮದು ಪ್ರತಿಸ್ಪರ್ಧಿಗಳ ನಡುವಿನ ಹೋರಾಟವಲ್ಲ. ಬದಲಾಗಿ, ಸಹೋದ್ಯೋಗಿಗಳ ನಡುವಿನ ಫ್ರೆಂಡ್ಲಿ ಫೈಟ್ ಆಗಿರಲಿದೆ’ ಎಂದಿದ್ದಾರೆ. ಶುಕ್ರವಾರ ಇವರಿಬ್ಬರೂ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇನ್ನು, ಜಾರ್ಖಂಡ್‌ನ ಕಾಂಗ್ರೆಸ್ ಶಾಸಕ ಕೆ.ಎನ್.ತ್ರಿಪಾಠಿ ಅವರೂ ನಾಮಪತ್ರದ ಅರ್ಜಿಯನ್ನು ಪಡೆದುಕೊಂಡಿದ್ದು, ಸ್ಪರ್ಧೆಯ ಸುಳಿವು ನೀಡಿದ್ದಾರೆ. ಮತ್ತೂಂದೆಡೆ, ಜಿ-23 ನಾಯಕರಲ್ಲಿ ಒಬ್ಬರಾದ ಮುಕುಲ್ ವಾಸ್ನಿಕ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.