ಜೈಪುರ: ರಾಜಸ್ಥಾನ ಸರಕಾರದಲ್ಲಿ ಉಂಟಾಗಿರುವ ತಲ್ಲಣ ಈಗ ತಾರಕಕ್ಕೇರಿದೆ. ಮುಖ್ಯಮಂತ್ರಿ ಅಶೋಕ್ ಪೈಲಟ್ ಮತ್ತು ಉಪಮುಖ್ಯಮಂತ್ರಿ ಸಚಿನ್ ಪೈಲಟ್ ನಡುವಿನ ಸಂಘರ್ಷ ಈಗ ಸರಕಾರ ಉರುಳುವ ಲಕ್ಷಣಗಳನ್ನು ಗೋಚರಿಸುತ್ತಿದೆ.
ಸರಕಾರದ ವಿರುದ್ಧ ಸಚಿನ್ ಪೈಲಟ್ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಅಪಸ್ವರ ಎದ್ದ ಕಾರಣ ಇಂದಿನ ಸಭೆಗೆ ಹಾಜರಾಗುವಂತೆ ಕಾಂಗ್ರೆಸ್ ಎಲ್ಲಾ ಶಾಸಕರಿಗೂ ವಿಪ್ ಜಾರಿ ಮಾಡಿದೆ.
ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ನಾಯಕರಾದ ಅಜಯ್ ಮಾಕೆನ್, ರಣದೀಪ್ ಸುರ್ಜೇವಾಲ ಮತ್ತು ಅವಿನಾಶ್ ಪಾಂಡೆ, ಪಕ್ಷದ ಎಲ್ಲಾ ಶಾಸಕರಿಗೂ ವಿಪ್ ನೀಡಿರುವುದಾಗಿ ಹೇಳಿದರು. ಒಂದು ವೇಳೆ ನಿಯಮ ಉಲ್ಲಂಘಿಸಿದಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
30ಕ್ಕೂ ಹೆಚ್ಚು ಕಾಂಗ್ರೆಸ್ ಮತ್ತು ಸ್ವತಂತ್ರ ಶಾಸಕರು ಸಚಿನ್ ಪೈಲಟ್ ಗೆ ಬೆಂಬಲ ಸೂಚಿಸಿದ್ದಾರೆ. ಇದರಿಂದ ಗೆಹ್ಲೊಟ್ ಸರಕಾರ ಅಲ್ಪಮತಕ್ಕೆ ಕುಸಿಯುವ ಭೀತಿಯಿದೆ.
ಪರಿಸ್ಥಿತಿ ತಿಳಿಗೊಳಿಸಲು ಕಾಂಗ್ರೆಸ್ ಇಂದು ಸಭೆ ನಡೆಸಲಿದೆ. ಇದಕ್ಕೆ ಎಲ್ಲಾ ಶಾಸಕರು ಸೇರಬೇಕೆಂದು ವಿಪ್ ನೀಡಿದೆ. ಆದರೆ ಸಚಿನ್ ಪೈಲಟ್ ಇಂದಿನ ಸಭೆಗೆ ಹಾಜರಾಗುವುದಿಲ್ಲ ಎಂದು ಪೈಲಟ್ ಅವರ ಆಪ್ತ ಮೂಲಗಳು ತಿಳಿಸಿದೆ