ಅಬುಧಾಬಿ: ಐಪಿಎಲ್ 13ನೇ ಆವೃತ್ತಿಯ 45ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಪೊಲಾರ್ಡ್ ಬಳಗ ಬ್ಯಾಟಿಂಗ್ ಆಯ್ದುಕೊಂಡಿದೆ.
ಐಪಿಎಲ್ 13 ನೇ ಆವೃತ್ತಿಯಲ್ಲಿ ರಾಯಲ್ಸ್ ಉಳಿಯಬೇಕಾದರೇ ಇಂದಿನ ಪಂದ್ಯ ಗೆಲ್ಲಲೇಬೇಕಾಗಿದೆ. ಸದ್ಯ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಸ್ಮಿತ್ ಪಡೆ ಇಂದಿನ ಪಂದ್ಯ ಗೆಲ್ಲುವತ್ತ ಗಮನಹರಿಸಿದೆ.
ಮತ್ತೊಂದೆಡೆ ಅತ್ಯಧಿಕ ರನ್ ರೇಟ್ ನೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾದಲ್ಲಿ ಮುಂಬೈ ಇಂಡಿಯನ್ಸ್ ತಂಡವಿದೆ. ಇಂದು ಕೂಡ ನಾಯಕ ರೋಹಿತ್ ಶರ್ಮಾ ಅನುಪಸ್ಥಿತಿ ತಂಡವನ್ನು ಕಾಡಲಿದ್ದು, ಕೀರನ್ ಪೊಲಾರ್ಡ್ ತಂಡವನ್ನು ಮುನ್ನಡೆಸಲಿದ್ದಾರೆ.
ಹನ್ನೊಂದರ ಬಳಗ:
ರಾಜಸ್ಥಾನ್ ರಾಯಲ್ಸ್: ರಾಬಿನ್ ಉತ್ತಪ್ಪ, ಬೆನ್ ಸ್ಟೋಕ್ಸ್, ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್, ಸ್ಟೀವನ್ ಸ್ಮಿತ್ (ನಾಯಕ), ರಿಯಾನ್ ಪರಾಗ್, ರಾಹುಲ್ ತಿವಾಟಿಯಾ, ಜೋಫ್ರಾ ಆರ್ಚರ್, ಶ್ರೇಯಾಸ್ ಗೋಪಾಲ್, ಅಂಕಿತ್ ರಾಜ್‌ಪೂತ್, ಕಾರ್ತಿಕ್ ತ್ಯಾಗಿ
ಮುಂಬೈ ಇಂಡಿಯನ್ಸ್: ಕ್ವಿಂಟನ್ ಡಿ ಕಾಕ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್ (ನಾಯಕ), ಕ್ರುನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ