Advertisement
ಘಟನೆಗೆ ಸಂಬಂಧಿಸಿ ಮಹಿಳೆಯ ಪತಿ, ಅತ್ತೆ ಹಾಗೂ ಮಾವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕಳೆದ ಸೋಮವಾರ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸಂತ್ರಸ್ತ ಮಹಿಳೆ ಕಳೆದ ವರ್ಷ ವಿವಾಹವಾಗಿದ್ದು ಮಹಿಳೆ ನೆರೆಹೊರೆಯ ಪುರುಷನೊಂದಿಗೆ ಓಡಿಹೋಗಿದ್ದಾಳೆ ಎಂದು ಆರೋಪಿಸಿ ಆಕೆಯ ಪತಿ ಮತ್ತು ಅತ್ತೆ ಸೇರಿಕೊಂಡು ಮಹಿಳೆಗೆ ಥಳಿಸಿದ್ದಾರೆ. ಅಲ್ಲದೆ ಆರೋಪಿಗಳು ಆಕೆಯನ್ನು ವಿವಸ್ತ್ರಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ಅಲ್ಲದೆ ಅಮಾನವೀಯ ಘಟನೆಯ ವಿಡಿಯೋ ಕೂಡ ಪತಿಯ ಜೊತೆಗಿದ್ದ ಇತರ ಯುವಕರು ಸೆರೆ ಹಿಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಘಟನೆಗೆ ಸಂಬಂಧಿಸಿ ಮಹಿಳೆಯ ಪತಿ ಅತ್ತೆ ಹಾಗೂ ಮಾವನನ್ನು ವಶಕ್ಕೆ ಪಡೆದುಕೊಂಡ ಪೊಲೀಸರು, ಕೃತ್ಯಕ್ಕೆ ಸಹಕರಿಸಿದ ಇತರ ಏಳು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಒಟ್ಟು 10 ಜನರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 (ಅಶ್ಲೀಲ ಕಾಯ್ದೆ), 354 (ಮಹಿಳೆಯರ ಮೇಲೆ ಹಲ್ಲೆ), 365 (ಅಪಹರಣ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67 (ಅಶ್ಲೀಲ ವಸ್ತುಗಳನ್ನು ರವಾನಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ರಾಜಸ್ಥಾನದ ಪ್ರತಾಪ್‌ಗಢ ಡಿಜಿಪಿ ಉಮೇಶ್ ಮಿಶ್ರಾ ಅವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
Related Articles
ರಾಜಸ್ಥಾನದಲ್ಲಿ ನಡೆದ ಘಟನೆ ಬಗ್ಗೆ ಹೇಳಿಕೆ ನೀಡಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಇದೊಂದು ಹೇಯ ಕೃತ್ಯ ಈ ಪ್ರಕರಣದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಅವರೆಲ್ಲರಿಗೂ ಕಠಿಣ ಶಿಕ್ಷೆ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.
Advertisement
ಇದನ್ನೂ ಓದಿ: Alert: ಸಾರ್ವಜನಿಕರೇ ಎಚ್ಚರ! ಬಂಟಕಲ್ಲು ಪರಿಸರದಲ್ಲಿ ಹುಚ್ಚು ನಾಯಿ ಹಾವಳಿ, ಇಬ್ಬರಿಗೆ ಗಾಯ