Advertisement

ಶೂಟಿಂಗ್ ಮುಗಿಸಿದ ‘ಹಿರಣ್ಯ’: ಪೋಸ್ಟ್ ಪ್ರೊಡಕ್ಷನ್ ನಲ್ಲಿ ರಾಜವರ್ಧನ್ ಚಿತ್ರ

06:25 PM May 16, 2023 | Team Udayavani |

ನಟ ರಾಜವರ್ಧನ್‌ ನಾಯಕನಾಗಿ ಅಭಿನಯಿಸುತ್ತಿರುವ “ಹಿರಣ್ಯ’ ಸಿನಿಮಾದ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯವಾಗಿದೆ. “ಹಿರಣ್ಯ’ ಸಿನಿಮಾದ ಬಹುತೇಕ ಚಿತ್ರೀಕರಣ ಬೆಂಗಳೂರು ಸುತ್ತಮುತ್ತ ನಡೆಸಲಾಗಿದ್ದು, ಸದ್ಯ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳತ್ತ ಮುಖ ಮಾಡಿದೆ. “ಹಿರಣ್ಯ’ ಸಿನಿಮಾಗೆ ಪ್ರವೀಣ್‌ ಅವ್ರ್ಯುಕ್ತ್ ಆ್ಯಕ್ಷನ್‌-ಕಟ್‌ ಹೇಳಿದ್ದಾರೆ.

Advertisement

ಈಗಾಗಲೇ ಹಲವು ಶಾರ್ಟ್‌ ಮೂವಿಗಳನ್ನು ನಿರ್ದೇಶನ ಮಾಡಿದ ಅನುಭವ ಇರುವ ಪ್ರವೀಣ್‌ ಅವ್ರ್ಯುಕ್ತ್ “ಹಿರಣ್ಯ’ ಸಿನಿಮಾದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಸ್ಯಾಂಡಲ್‌ವುಡ್‌ಗೆ ಪರಿಚಯವಾಗುತ್ತಿದ್ದಾರೆ. “ಹಿರಣ್ಯ’ ಸಿನಿಮಾದಲ್ಲಿ ರಾಜವರ್ಧನ್‌ಗೆ ನಾಯಕಿಯಾಗಿ ರಿಹಾನಾ ಜೋಡಿಯಾಗಿದ್ದು, ಈ ಸಿನಿಮಾದ ಮೂಲಕ ರಿಹಾನಾ ಚಂದನವನಕ್ಕೆ ಪರಿಚಯವಾಗುತ್ತಿದ್ದಾರೆ.

ಆ್ಯಕ್ಷನ್‌-ಥ್ರಿಲ್ಲರ್‌ ಜೊತೆಗೆ ತಾಯಿ ಸೆಂಟಿಮೆಂಟ್‌ ಕಥಾಹಂದರ ಹೊಂದಿರುವ “ಹಿರಣ್ಯ’ ಸಿನಿಮಾದಲ್ಲಿ ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಉಳಿದಂತೆ ಹುಲಿ ಕಾರ್ತಿಕ್‌, ಅರವಿಂದ ರಾವ್‌, ದಿಲೀಪ್‌ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. “ವೇದಾಸ್‌ ಇನ್ಫಿನಿಟಿ ಪಿಕ್ಚರ್’ ಬ್ಯಾನರ್‌ನಲ್ಲಿ ವಿಘ್ನೇಶ್ವರ ಯು. ಹಾಗೂ ವಿಜಯ್‌ ಕುಮಾರ್‌ ಬಿ. ವಿ ಜಂಟಿಯಾಗಿ ಬಂಡವಾಳ ಹೂಡಿ ನಿರ್ಮಿಸುತ್ತಿರುವ “ಹಿರಣ್ಯ’ ಸಿನಿಮಾಕ್ಕೆ ಯೋಗೇಶ್ವರನ್‌ ಆರ್‌. ಛಾಯಾಗ್ರಹಣವಿದೆ.

ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ.  ಸದ್ಯ ಚಿತ್ರೀಕರಣ ಮುಗಿಸಿ ಪೋಸ್ಟ್‌ ಪ್ರೊಡಕ್ಷನ್‌ ಕೆಲಸದಲ್ಲಿ ನಿರತವಾಗಿರುವ “ಹಿರಣ್ಯ’ ಸಿನಿಮಾವನ್ನು ಆಗಸ್ಟ್‌ ವೇಳೆಗೆ ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

Advertisement
Advertisement

Udayavani is now on Telegram. Click here to join our channel and stay updated with the latest news.

Next