Advertisement

CM Siddaramaiah ತೇಜೋವಧೆ ಖಂಡಿಸಿ ನಾಡಿದ್ದು ‘ರಾಜಭವನ ಚಲೋ’

12:57 AM Aug 25, 2024 | Team Udayavani |

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಆ. 27ರಂದು “ರಾಜಭವನ ಚಲೋ’ ಹಮ್ಮಿಕೊಳ್ಳ ಲಾಗಿದೆ ಎಂದು ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ರಾಜ್ಯ ಸಂಚಾಲಕ ಅನಂತ ನಾಯಕ್‌ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

Advertisement

ರಾಜ್ಯಪಾಲ ಗೆಹ್ಲೋಟ್‌ ಸಂವಿಧಾನದ ಮೂಲ ತಣ್ತೀಗಳು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿದ್ದಾರೆ. ರಾಜಭವನವನ್ನು ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ಕಚೇರಿಯನ್ನಾಗಿ ಪರಿವರ್ತಿಸಿಕೊಂಡಿದ್ದಾರೆ ಎಂದರು.

ಸಿದ್ದರಾಮಯ್ಯ ಅವರ ಕುರ್ಚಿ ಅಲುಗಾಡಿದರೆ ರಾಜ್ಯದಲ್ಲಿ ಪರಿಸ್ಥಿತಿ ಬಿಗಡಾಯಿಸಲಿದೆ ಎಂದು ಇದೇ ವೇಳೆ ಮಾನವ ಬಂಧುತ್ವ ವೇದಿಕೆ ಸಂಚಾಲಕ ಸುನೀಲ ಮಾರುತಿ ಮಾನ್ಪಡೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next