Advertisement

ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿ ರಾಜೇಂದ್ರ ಕುಮಾರ್‌ ಆಯ್ಕೆ

11:32 AM Oct 07, 2017 | Team Udayavani |

ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ರಂಗದ ನೇತಾರ ಡಾ| ಎಂ. ಎನ್‌. ರಾಜೇಂದ್ರಕುಮಾರ್‌ ಅವರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

Advertisement

ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಆಡಳಿತ ಮಂಡ ಳಿಯ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ಬಸಗೌಡ ರಾಮಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಮಂಗಳೂರು ತಾಲೂಕು ವ್ಯವ ಸಾಯೋತ್ಪನ್ನ ಮಾರಾಟ ಸಹಕಾರಿ ಸಂಘದ ಪ್ರತಿನಿಧಿಯಾಗಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ನಿರ್ದೇಶಕರ ಚುನಾವಣೆಗೆ ಸ್ಪರ್ಧಿಸಿದ ರಾಜೇಂದ್ರ ಕುಮಾರ್‌ ಅವಿರೋಧವಾಗಿ ಆಯ್ಕೆಗೊಂಡು, ಈಗ ಅಧ್ಯಕ್ಷರಾಗಿಯೂ ಆಯ್ಕೆಯಾಗಿ ದ್ದಾರೆ. ಆ ಮೂಲಕ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ಇತಿಹಾಸದಲ್ಲಿ 1945ರ ಅನಂತರ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೊದಲ ಅಧ್ಯಕ್ಷ ಎನಿಸಿಕೊಂಡಿದ್ದಾರೆ. 

ಸುಮಾರು 23 ವರ್ಷ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ (ಎಸ್‌ಸಿಡಿಸಿಸಿ ಬ್ಯಾಂಕ್‌) ಅಧ್ಯಕ್ಷರಾಗಿ ಎಸ್‌ಸಿಡಿಸಿಸಿ ಬ್ಯಾಂಕ್‌ ಅನ್ನು ಉತ್ತಂಗಕ್ಕೇ ರಿಸಿದ್ದಲ್ಲದೇ ರಾಜ್ಯದಲ್ಲೇ ಮಾದರಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಗಿ ರೂಪಿಸಿದ್ದಾರೆ. ರಾಜೇಂದ್ರ ಕುಮಾರ್‌ ಅವರ ಅಧ್ಯಕ್ಷ ಅವಧಿಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿಗೆ 19 ಬಾರಿ ರಾಜ್ಯ ಅಪೆಕ್ಸ್‌ ಬ್ಯಾಂಕ್‌ ಪ್ರಶಸ್ತಿ, 18 ಬಾರಿ ರಾಜ್ಯ ನಬಾರ್ಡ್‌ ಪ್ರಶಸ್ತಿ ಸಹಿತ ವಿವಿಧ ಪ್ರಶಸ್ತಿಗಳು ಲಭಿಸಿವೆ. ಅವರು 1999ರಿಂದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕಿನ ನಿರ್ದೇಶಕ ರಾಗಿದ್ದು, 2005ರಿಂದ 2010ರ ವರೆಗೆ ಈ ಪ್ರತಿಷ್ಠಿತ ಬ್ಯಾಂಕಿನ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ನವೋದಯ ಗ್ರಾಮ ವಿಕಾಸ ಚಾರಿಟೇಬಲ್‌ ಟ್ರಸ್ಟ್‌ನ ಮ್ಯಾನೇಜಿಂಗ್‌ ಟ್ರಸ್ಟಿಯಾಗಿ ನವೋದಯ ಸ್ವ ಸಹಾಯ ಸಂಘಗಳ ರಚನೆಯಲ್ಲಿ ಹಾಗೂ ಈ ಯೋಜನೆಯನ್ನು ವ್ಯಾಪಕವಾಗಿ ಅಂತರ್‌ ಜಿಲ್ಲಾ ಮಟ್ಟದಲ್ಲಿ ಎಂ. ಎನ್‌. ರಾಜೇಂದ್ರಕುಮಾರ್‌ ಸಂಘಟಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next