Advertisement

ಕಂಬಳ ಕುರಿತಾದ ಬಾಬು ರಾಜೇಂದ್ರ ಸಿಂಗ್ ನಿರ್ದೇಶನದ ಚಿತ್ರದ ಟೈಟಲ್ ಪೋಸ್ಟರ್ ಬಿಡುಗಡೆ

03:43 PM Aug 10, 2021 | Team Udayavani |

ಕರಾವಳಿಯ ಜಾನಪದ ಕ್ರೀಡೆ ಕಂಬಳದ ಕುರಿತಾದ ಚಿತ್ರವನ್ನು ಸ್ಯಾಂಡಲ್ ವುಡ್ ನಿರ್ದೇಶಕ ಬಾಬು ರಾಜೇಂದ್ರ ಸಿಂಗ್ ನಿರ್ದೇಶನ ಮಾಡಲಿದ್ದಾರೆಂಬ ಸುದ್ದಿ ನೀವು ಓದಿರುತ್ತೀರಿ. ಇದೀಗ ಚಿತ್ರತಂಡದಿಂದ ದೊಡ್ಡ ಸುದ್ದಿ ಹೊರಬಿದ್ದಿದೆ.

Advertisement

ಚಿತ್ರತಂಡ ಇಂದು ಟೈಟಲ್ ಮತ್ತು ಪೋಸ್ಟರ್ ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಿತ್ರದ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಇದನ್ನೂ ಓದಿ:ಫೈಟರ್ ಸಾವು ಪ್ರಕರಣ: ದೂರು ದಾಖಲಾಗುತ್ತಿದ್ದಂತೆ ನಿರ್ಮಾಪಕ ಗುರು ದೇಶಪಾಂಡೆ ನಾಪತ್ತೆ ?

ಚಿತ್ರಕ್ಕೆ “ಬಿರ್ದ್ ದ ಕಂಬುಲ” ಎಂದು ಹೆಸರಿಡಲಾಗಿದೆ. ಕಥೆ, ಚಿತ್ರಕಥೆ ಮತ್ತು ನಿರ್ದೇಶನದ ಜವಾಬ್ದಾರಿಯನ್ನು ಬಾಬು ರಾಜೇಂದ್ರ ಸಿಂಗ್ ಹೊತ್ತುಕೊಂಡಿದ್ದಾರೆ. ‘ಎಆರ್ ಪ್ರೊಡಕ್ಷನ್ಸ್’ ಬ್ಯಾನರ್ ನಡಿ ಅರುಣ್ ರೈ ತೋಡಾರ್ ಈ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ. ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು ಸಂಭಾಷಣೆ ಬರೆದಿದ್ದಾರೆ.

Advertisement

ತುಳು ಮತ್ತು ಕನ್ನಡ ಭಾಷೆಯಲ್ಲಿ ಚಿತ್ರ ತೆರೆ ಕಾಣಲಿದ್ದು, ಡಿಸೆಂಬರ್ ನಲ್ಲಿ ಬಿಡುಗಡೆ ಮಾಡುವ ಯೋಜನೆಯಲ್ಲಿದೆ ಚಿತ್ರತಂಡ.

Advertisement

Udayavani is now on Telegram. Click here to join our channel and stay updated with the latest news.

Next