Advertisement

Rajiv Gandhi 32nd death anniversary: ಸೋನಿಯಾ,ರಾಹುಲ್,ಖರ್ಗೆ ಸೇರಿ ಗಣ್ಯರಿಂದ ಪುಷ್ಪನಮನ

10:12 AM May 21, 2023 | Team Udayavani |

ನವದೆಹಲಿ: ಇಂದು ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿ ಅಂಗವಾಗಿ ದೆಹಲಿಯ ವೀರಭೂಮಿಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶ್ರದ್ಧಾಂಜಲಿ ಸಲ್ಲಿಸಿದರು.

Advertisement

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಪುಷ್ಪನಮನ ಸಲ್ಲಿಸಿದರು.

ರಾಹುಲ್ ಗಾಂಧಿ ಟ್ವಿಟರ್‌ನಲ್ಲಿ ತಮ್ಮ ತಂದೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಆಗಸ್ಟ್ 20, 1944 ರಂದು ಜನಿಸಿದ ರಾಜೀವ್ ಗಾಂಧಿ ಉತ್ತರ ಪ್ರದೇಶದ ಅಮೇಥಿ ಸಂಸದೀಯ ಕ್ಷೇತ್ರವನ್ನು ನಾಲ್ಕು ಬಾರಿ ಪ್ರತಿನಿಧಿಸಿದ್ದರು. ಭಾರತ ರತ್ನ ಪುರಸ್ಕೃತರಾದ ರಾಜೀವ್ ಗಾಂಧಿ ಅವರು 1984 ರಿಂದ 1989 ರವರೆಗೆ ಭಾರತದ ಆರನೇ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. 1984 ರಲ್ಲಿ ಅವರ ತಾಯಿ, ಆಗಿನ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯ ನಂತರ ಅವರು ಅಧಿಕಾರ ವಹಿಸಿಕೊಂಡರು.


ಪ್ರತಿ ವರ್ಷ ಮೇ 21 ರಂದು, ಮಾಜಿ ಪ್ರಧಾನಿಯವರ ಮರಣದ ಸ್ಮರಣಾರ್ಥ ಭಾರತ ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸುತ್ತದೆ. ಅವರು 40 ನೇ ವಯಸ್ಸಿನಲ್ಲಿ ಅಧಿಕಾರಕ್ಕೆ ಬಂದ ಭಾರತದ ಅತ್ಯಂತ ಕಿರಿಯ ಪ್ರಧಾನಿಯಾಗಿದ್ದರು.

Advertisement


1991ರ ಮೇ 21ರಂದು ತಮಿಳುನಾಡಿನ ಶ್ರೀಪೆರಂಬದೂರ್ ಪಟ್ಟಣದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ರಾಜೀವ್ ಗಾಂಧಿಯವರು ಆತ್ಮಹತ್ಯಾ ಬಾಂಬರ್‌ನಿಂದ ಹತ್ಯೆಗೀಡಾದರು.

Advertisement

Udayavani is now on Telegram. Click here to join our channel and stay updated with the latest news.

Next