Advertisement

ರಾಜೀವ್‌ ಗಾಂಧಿ ಹತ್ಯೆ ಆರೋಪಿ ಪೇರರಿವಾಲನ್‌ಗೆ ಜಾಮೀನು

07:51 PM Mar 09, 2022 | Team Udayavani |

ನವದೆಹಲಿ: ಮಾಜಿ ಪ್ರಧಾನಿ ದಿ.ರಾಜೀವ್‌ ಗಾಂಧಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಎ.ಜಿ.ಪೇರರಿವಾಲನ್‌ಗೆ ಸುಪ್ರೀಂಕೋರ್ಟ್‌ ಬುಧವಾರ ಜಾಮೀನು ನೀಡಿದೆ.

Advertisement

ಮೂವತ್ತು ವರ್ಷಗಳಿಂದ ಆತ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವುದನ್ನು ಗಮನಿಸಿಕೊಂಡು ನ್ಯಾ.ಎಲ್‌.ನಾಗೇಶ್ವರ ರಾವ್‌ ಮತ್ತು ನ್ಯಾ.ಬಿ.ಆರ್‌.ಗವಾಯ್‌ ಅವರನ್ನೊಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. 2014ರಲ್ಲಿ ಆತನಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಾಡು ಮಾಡಲಾಗಿತ್ತು.

ಜಾಮೀನು ಪಡೆದುಕೊಂಡ ಬಳಿಕ ತಮಿಳುನಾಡು ರಾಜಧಾನಿ ಚೆನ್ನೈ ಸಮೀಪದ ಪೊಲೀಸ್‌ ಠಾಣೆಗೆ ಪ್ರತಿ ತಿಂಗಳ ಮೊದಲ ವಾರದಲ್ಲಿ ವರದಿ ಮಾಡಿಕೊಳ್ಳಬೇಕು. ಆತನ ಬಿಡುಗಡೆಗೆ ಸಂಬಂಧಿಸಿದಂತೆ ಸ್ಥಳೀಯ ಕೋರ್ಟ್‌ ಅಗತ್ಯ ಬಿದ್ದರೆ ಹೆಚ್ಚುವರಿ ನಿಯಮಗಳನ್ನು ವಿಧಿಸಲೂ ಅವಕಾಶ ಇದೆ ಎಂದು ನ್ಯಾಯಪೀಠ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಕೇಂದ್ರ ಸರ್ಕಾರದ ಪರವಾಗಿ ವಾದಿಸಿದ್ದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಕೆ.ಎಂ.ನಟರಾಜ್‌ ಜಾಮೀನು ನೀಡುವುದಕ್ಕೆ ಪ್ರಬಲವಾಗಿ ವಿರೋಧಿಸಿದರು. ಇದರ ಹೊರತಾಗಿಯೂ ಜಾಮೀನು ನೀಡುವುದಾಗಿ ನ್ಯಾಯಪೀಠ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next