Advertisement

ರಾಜೀವ್‌ ಗಾಂಧಿ 27ನೇ ಪುಣ್ಯತಿಥಿ: ಸೋನಿಯಾ, ರಾಹುಲ್‌ ಶ್ರದ್ಧಾಂಜಲಿ

03:41 PM May 21, 2018 | udayavani editorial |

ಹೊಸದಿಲ್ಲಿ : ಹಿರಿಯ ಕಾಂಗ್ರೆಸ್‌ ನಾಯಕ, ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರ ನೇತೃತ್ವದಲ್ಲಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಮತ್ತು ಯುಪಿಎ ಅಧ್ಯಕ್ಷೆ  ಸೋನಿಯಾ ಗಾಂಧಿ ಅವರಿಂದು ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ 27ನೇ ಪುಣ್ಯತಿಥಿಯಂದು ಶ್ರದ್ಧಾಂಜಲಿ ಅರ್ಪಿಸಿದರು. 

Advertisement

ಇಲ್ಲಿನ ವೀರಭೂಮಿ ಸ್ಮಾರಕದಲ್ಲಿಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ಅವರ ಸಹೋದರಿ ಪ್ರಿಯಾಂಕಾ ಗಾಂಧಿ, ಆಕೆಯ ಪತಿ ರಾಬರ್ಟ್‌ ವಾದ್ರಾ ಅವರು ಕೂಡ ಮಾಜಿ ಪ್ರಧಾನಿ ದಿ| ರಾಜೀವ್‌ ಗಾಂಧಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು. 

ಹಿರಿಯ ಕಾಂಗ್ರೆಸ್‌ ನಾಯಕರಾದ ಶೀಲಾ ದೀಕ್ಷಿತ್‌, ಅಶೋಕ್‌ ಗೆಹಲೋತ್‌, ಸುಶೀಲ್‌ ಕುಮಾರ್‌ ಶಿಂಧೆ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next