Advertisement
ಬುಧವಾರ ಬೆಳಿಗ್ಗೆ ಅರ್ಚಕನಹಳ್ಳಿಯಲ್ಲಿ ಸ್ಥಳ ಪರಿಶೀಲನೆ ಮಾಡಿದ ಅವರು, ಲಭ್ಯವಿರುವ ಜಾಗದಲ್ಲಿಯೇ ಆಡಳಿತಾತ್ಮಕ ಮಂಜೂರಾತಿ ಪಡೆದು ಕೂಡಲೇ ನಿರ್ಮಾಣ ಕೆಲಸಗಳನ್ನು ಆರಂಭಿಸುವಂತೆ ರಾಜೀವ್ ಗಾಂಧಿ ವಿವಿ ಕುಲಪತಿ ಡಾ.ಸಚ್ಚಿದಾನಂದ ಹಾಗೂ ಅಧಿಕಾರಿಗಳಿಗೆ ಸೂಚಿಸಿದರು.
Related Articles
Advertisement
ಈಗಾಗಲೇ 216 ಎಕರೆ ಭೂಮಿಯನ್ನು ಆರೋಗ್ಯ ವಿವಿಗಾಗಿ ಸ್ವಾಧೀನ ಮಾಡಿಕೊಳ್ಳಲಾಗಿದೆ. ಈ ಪೈಕಿ 40 ಎಕರೆ ಸರಕಾರಿ ಜಮೀನು. ಸ್ವಾಧೀನ ಮಾಡಿಕೊಂಡಿರವ ಕೆಲ ರೈತರ ಭೂಮಿಗೆ ಈಗಾಗಲೇ ಪರಿಹಾರ ನೀಡಲಾಗಿದೆ. ಸುಮಾರು 70 ಎಕರೆಗೆ ಸಂಬಂಧಿಸಿದ ಪರಿಹಾರ ವಿವಾದ ನ್ಯಾಯಾಲಯದಲ್ಲಿ ಇದೆ. ಕೋರ್ಟ್ ಆದೇಶದ ಪ್ರಕಾರ ಪರಿಹಾರ ನೀಡುತ್ತೇವೆ. ಸ್ಬಾಧೀನದಲ್ಲಿ ಇರುವ ಜಮೀನಿನಲ್ಲಿ ಕ್ಯಾಂಪಸ್ ನಿರ್ಮಾಣ ಮಾಡಬೇಕು ಎಂದು ಡಿಸಿಎಂ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ: ನಮ್ಮ ಫೇಸ್ ಬುಕ್ ಅನ್ನು ಮತ್ತೊಬ್ಬರು ಬಳಸುವುದನ್ನು ತಡೆಯುವುದು ಹೇಗೆ?
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಜತೆ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಆದಷ್ಟು ಬೇಗ ಕಾಮಗಾರಿಗಳನ್ನು ಆರಂಭಿಸಲು ಅವರೂ ಉತ್ಸುಕರಾಗಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳಾದ ಸಚಿವ ಸಿ.ಪಿ.ಯೋಗೀಶ್ವರ್, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಶಾಸಕರಾದ ಡಿ.ಕೆ. ಶಿವಕುಮಾರ್, ಅನಿತಾ ಕುಮಾರಸ್ವಾಮಿ, ಮಾಗಡಿ ಮಂಜುನಾಥ್ ಹಾಗೂ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಎಲ್ಲರೂ ಈ ಯೋಜನೆಯನ್ನು ಬೇಗ ಕಾರ್ಯಗತ ಮಾಡುವಂತೆ ಹೇಳುತ್ತಿದ್ದಾರೆ ಎಂದು ಡಿಸಿಎಂ ಮಾಹಿತಿ ನೀಡಿದರು.
ಆರೋಗ್ಯ ವಿವಿ ಜತೆಯಲ್ಲಿಯೇ ಸುಸಜ್ಜಿತವಾದ ಹೆಲ್ತ್ ಸಿಟಿಯನ್ನೂ ಇಲ್ಲಿ ನಿರ್ಮಾಣ ಮಾಡುವುದು ಸರಕಾರದ ಉದ್ದೇಶವಾಗಿದೆ. ಈ ಎರಡು ಯೋಜನೆಗಳು ಕಾರ್ಯಗತವಾದರೆ ಈ ಭಾಗದ ಜನರಿಗೆ ರಾಮನಗರದಲ್ಲಿಯೇ ಅಂತಾರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆ ದೊರೆಯುತ್ತದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅರ್ಚನಾ, ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ, ಶಾಸಕಿ ಅನಿತಾ ಕುಮಾರಸ್ವಾಮಿ, ಆರೋಗ್ಯ ವಿವಿ ಕುಲಪತಿ ಡಾ.ಸಚ್ಚಿದಾನಂದ, ಕೆಐಎಡಿಬಿ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: ಮ್ಯಾಗ್ನೆಟ್ ಮ್ಯಾನ್ ಆಗಲು ಹುಚ್ಚು ಸಾಹಸ : ಈತನ ಹೊಟ್ಟೆಯಲ್ಲಿ ಸಿಕ್ಕಿದ್ದು ಏನು ಗೊತ್ತಾ ?