Advertisement

ರಾಜೀವ್‌ ಗಾಂಧಿ ವಿವಿ ಕಾಯೆ ತಿದ್ದುಪಡಿಗೆ ವಿರೋಧ

06:08 PM Dec 18, 2021 | Team Udayavani |

ಹಾವೇರಿ: ರಾಜೀವ್‌ ಗಾಂಧಿ  ವಿಶ್ವವಿದ್ಯಾನಿಲಯದ ಕಾಯ್ದೆ ತಿದ್ದುಪಡಿ ಯನ್ನು ಖಂಡಿಸಿ ಹಾಗೂ ಸರ್ಕಾರ ತನ್ನ ಪ್ರಸ್ತಾವನೆ ಹಿಂಪಡೆಯಬೇಕೆಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಹಾವೇರಿ ಶಾಖೆ ವತಿಯಿಂದ ಉಪ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

Advertisement

ಈ ಸಂದರ್ಭದಲ್ಲಿ ವಿದ್ಯಾರ್ಥಿ ಪರಿಷತ್‌ ತಾಲೂಕು ಸಹ ಸಂಚಾಲಕ ಸುದೀಪ್‌ ಮಾತನಾಡಿ, ರಾಜ್ಯದ ಏಕೈಕ ಹಾಗೂ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾಲಯವಾದ ರಾಜೀವ್‌ ಗಾಂಧಿ ವಿಶ್ವವಿದ್ಯಾನಿಲಯ ದೇಶದ ವೈದ್ಯಕೀಯ ಶಿಕ್ಷಣದಲ್ಲಿ ಅಗ್ರ ಸ್ಥಾನದಲ್ಲಿದೆ. ಸಾವಿರಾರು ವಿದ್ಯಾರ್ಥಿಗಳು ದೇಶ-ವಿದೇಶಗಳಿಂದ ಬಂದು ವೈದ್ಯಕೀಯ ಶಿಕ್ಷಣ ಪಡೆಯಲು ವಿವಿಯ ಮೇಲೆ ಅವಲಂಬಿತರಾಗಿದ್ದಾರೆ.

ವಿವಿಗೆ ಸಂಬಂಧಿಸಿದ ಆಡಳಿತಾತ್ಮಕ ಹಾಗೂ ಹಣಕಾಸಿನ ವಿಷಯಗಳ ಬಗ್ಗೆ ಈಗಿರುವ ರಚನೆಯಂತೆ ವಿದ್ಯಾರ್ಥಿಗಳ ಹಿತದೃಷ್ಟಿಯಲ್ಲಿ ಅಗತ್ಯ ತೀರ್ಮಾನ ತೆಗೆದುಕೊಳ್ಳುವ ವಿಶ್ವವಿದ್ಯಾಲಯಕ್ಕೆ ಸ್ವಾಯತ್ತತೆ ರಚನೆ ಈ ವರೆಗೆ ಸರಿಯಾಗಿ ನಡೆದುಬಂದಿದೆ.

ಪ್ರಸ್ತುತ ರಾಜ್ಯ ಸರ್ಕಾರ ವಿಶ್ವವಿದ್ಯಾಲಯದ ಹಣಕಾಸಿನ ವಿಷಯಗಳನ್ನು ತಮ್ಮ ಹಿಡಿತದಲ್ಲಿರಿಸಿಕೊಳ್ಳುವ ನಿಟ್ಟಿನಲ್ಲಿ ಈಗಿರುವ ಕಾಯ್ದೆಯನ್ನು ತಿದ್ದುಪಡಿ ಮಾಡುತ್ತಿರುವುದನ್ನು ಖಂಡನೀಯ ಎಂದರು. ವಿಶ್ವವಿದ್ಯಾಲಯದ ನಿಧಿಯ ಉಪಯೋಗಕ್ಕೆ ವಿಶ್ವವಿದ್ಯಾಲಯದ ಒಪ್ಪಿಗೆ ಇಲ್ಲದೇ ಸರ್ಕಾರವೇ ಏಕಪಕ್ಷೀಯವಾಗಿ ನಿಧಿ ಖರ್ಚು ಮಾಡಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಾನೂನು ತಿದ್ದುಪಡಿ ಮಾಡಲು ಹೊರಟಿರುವುದು ವಿಶ್ವವಿದ್ಯಾಲಯದ ಹಿತದೃಷ್ಟಿಯಿಂದ ಸಮಂಜಸವಲ್ಲ.

ಆದಷ್ಟು ಬೇಗ ಸರ್ಕಾರ ತನ್ನ ಪ್ರಸ್ತಾವನೆ ಹಿಂಪಡೆಯಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ನಗರ ಕಾರ್ಯದರ್ಶಿ ಲಿಂಗರಾಜ್‌ ಬೀದಿಮನಿ, ನಗರ ಸಹಕಾರ್ಯದರ್ಶಿ ಸಿದ್ದರಾಮೇಶ, ಬಸವರಾಜ, ಅರುಣ, ಅಭಿಲಾಷ ಇತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next