Advertisement

ರಾಜೀವ್ ಗಾಂಧಿ ವಿವಿ ವ್ಯಾಪ್ತಿಯ ಕಾಲೇಜುಗಳು ಡಿ.1 ರಿಂದ ಆರಂಭ: ಸಚಿವ ಸುಧಾಕರ್

02:58 PM Nov 13, 2020 | keerthan |

ಚಿತ್ರದುರ್ಗ: ರಾಜೀವ್ ಗಾಂಧಿ ವಿಶ್ವವಿದ್ಯಾಲಯ ವ್ಯಾಪ್ತಿಯ ಮೆಡಿಕಲ್ ಕಾಲೇಜುಗಳನ್ನು ಡಿಸೆಂಬರ್ ಒಂದರಿಂದ ಆರಂಭಿಸಲು ತೀರ್ಮಾನಿಸಲಾಗಿದೆ‌ ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

Advertisement

ಚಿತ್ರದುರ್ಗ ಜಿಲ್ಲಾಸ್ಪತ್ರೆ ಆವರಣದಲ್ಲಿ ನೂತನ ಮೆಡಿಕಲ್ ಕಾಲೇಜು ಆರಂಭಿಸಲು ಸ್ಥಳ ಪರಿಶೀಲಿಸಲು ಆಗಮಿಸಿದ್ದ ವೇಳೆ ಮಾತನಾಡಿದರು.

ಕೋವಿಡ್ ಲಸಿಕೆ ಸಂಶೋಧನಾ ಪ್ರಯೋಗ ಮೂರನೇ ಹಂತದಲ್ಲಿ ನಡೆಯುತ್ತಿದ್ದು, ಶೇ.90. ರಷ್ಟು ಯಶಸ್ವಿಯಾಗಿದೆ. ಜನವರಿಯಿಂದ ಮಾರ್ಚ್ ವೇಳೆಗೆ ಲಭ್ಯವಾಗಬಹುದು.‌ ಈಗಾಗಲೇ ಅಗತ್ಯ ಸಿದ್ಧತೆಗಳು ನಡೆದಿವೆ ಎಂದರು.

ಚಿತ್ರದುರ್ಗದಲ್ಲಿ ಮುಂದಿನ 30 ತಿಂಗಳೊಳಗೆ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿ ಮುಗಿಯಲಿದೆ. ಮುಂದಿನ ವರ್ಷವೇ ಶೈಕ್ಷಣಿಕ ಚಟುವಟಿಕೆ ಆರಂಭಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಇದನ್ನೂ ಓದಿ:ಗ್ರಾಮಪಂಚಾಯತಿ ಚುನಾವಣೆಗೆ ಅಸ್ತು ಎಂದ ಹೈಕೋರ್ಟ್: 3 ವಾರದಲ್ಲಿ ವೇಳಾಪಟ್ಟಿ ಪ್ರಕಟಿಸಲು ಸೂಚನೆ

Advertisement

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ನಮ್ಮ ಸರ್ಕಾರದ ಆದ್ಯತೆ. ಈ ವರ್ಷಾಂತ್ಯದೊಳಗೆ ಚಿಕ್ಕಮಗಳೂರು, ಹಾವೇರಿ, ಯಾದಗಿರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಕಾಮಗಾರಿ ಶಂಕುಸ್ಥಾಪನೆ ಮಾಡಲಾಗುವುದು. ಇದರೊಟ್ಟಿಗೆ ಚಿತ್ರದುರ್ಗ ಕಾಲೇಜು ಕಾಮಗಾರಿ ಕೂಡಾ ಆರಂಭವಾಗಲಿದೆ. ಈಗಾಗಲೇ ಮುಖ್ಯಮಂತ್ರಿಗಳು 50 ಕೋಟಿ ರೂ.‌ಅನುದಾನ ನೀಡಿದ್ದಾರೆ. ಡಿಎಂಎಫ್ ಫಂಡ್ ಬಳಸಿಕೊಂಡು ಕಾಮಗಾರಿ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ನಾರಾಯಣಸ್ವಾಮಿ, ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ರಘುಮೂರ್ತಿ, ಪೂರ್ಣಿಮಾ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್.ನವೀನ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next