ನವದೆಹಲಿ: ಚುನಾವಣಾ ಆಯುಕ್ತರಾಗಿರುವ ರಾಜೀವ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರಾಗಿ(ಸಿಇಸಿ) ಗುರುವಾರ ನೇಮಕ ಮಾಡಿಕೊಳ್ಳಲಾಗಿದೆ. ಅವರು ಮೇ 15ರಂದು ಸಿಇಸಿ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.
Advertisement
ಸದ್ಯ ಸಿಇಸಿ ಸ್ಥಾನದಲ್ಲಿರುವ ಸುಶೀಲ್ ಚಂದ್ರ ಮೇ 14ರಂದು ನಿವೃತ್ತರಾಗಲಿರುವ ಹಿನ್ನೆಲೆ ಆ ಸ್ಥಾನಕ್ಕೆ ರಾಜೀವ್ ಕುಮಾರ್‌ರನ್ನು ನೇಮಿಸಿಕೊಳ್ಳಲಾಗಿದೆ. ರಾಜೀವ್ ಅವರು 2025ರ ಫೆಬ್ರವರಿವರೆಗೆ ಈ ಸ್ಥಾನದಲ್ಲಿರಲಿದ್ದಾರೆ.
ರಾಷ್ಟ್ರಪತಿ ಚುನಾವಣೆ, ಉಪ ರಾಷ್ಟ್ರಪತಿ ಚುನಾವಣೆ ಹಾಗೂ 2024ರ ಲೋಕಸಭಾ ಚುನಾವಣೆಯ ಮೇಲ್ವಿಚಾರಣೆಯನ್ನು ಅವರು ವಹಿಸಿಕೊಳ್ಳಲಿದ್ದಾರೆ.